- Advertisement -
![]()
- Advertisement -
ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ಕಾಲಿವುಡ್ ನಟ ಮತ್ತು ಟಿವಿಕೆ ಪಕ್ಷದ ಸಂಸ್ಥಾಪಕ ವಿಜಯ್ ಚುನಾವಣಾ ರ‌್ಯಾಲಿ ವೇಳೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ಮೂವರು ಸದಸ್ಯರ ಸಮಿತಿಯಿಂದ ತನಿಖೆಯ ಮೇಲ್ವಿಚಾರಣೆಗೆ ಆದೇಶಿಸಲಾಗಿದ್ದು,
ಇಬ್ಬರು ಐಜಿಪಿ ರ‌್ಯಾಂಕ್ ಅಧಿಕಾರಿಗಳು ಸಮಿತಿಯಲ್ಲಿ ಇರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸೆಪ್ಟೆಂಬರ್ 27 ರಂದು ಟಿವಿಕೆ ಪಕ್ಷದ ರ‌್ಯಾಲಿಯಲ್ಲಿ 41 ಜನರು ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ್ದರು, ನಟ ವಿಜಯ್ ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ತನಿಖೆಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಹಾಗೂ ಎನ್.ವಿ. ಅಂಜಾರಿಯಾ ಅವರ ಪೀಠ ಇಂದು ಸಿಬಿಐ ತನಿಖೆಗೆ ಆದೇಶ ನೀಡಿದೆ.
- Advertisement -


