Sunday, May 5, 2024
Homeತಾಜಾ ಸುದ್ದಿಕೋವಿಡ್ ಲಸಿಕೆ ಹಾಕಿಸಲು ಯಾವುದೇ ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂಕೋರ್ಟ್ ಹೇಳಿಕೆ

ಕೋವಿಡ್ ಲಸಿಕೆ ಹಾಕಿಸಲು ಯಾವುದೇ ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂಕೋರ್ಟ್ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಲಸಿಕೆ ಹಾಕಿಸಲು ಸಾಧ್ಯವಿಲ್ಲ ಮತ್ತು ಪ್ರಸ್ತುತ ಇರುವ ಸರ್ಕಾರದ ಕೋವಿಡ್ -19 ಲಸಿಕೆ ನೀತಿಯು ಅನಿಯಂತ್ರಿತವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವೈ ಅವರಿದ್ದ ದ್ವಿಸದಸ್ಯ ಪೀಠ, ವಿವಿಧ ಸಂಸ್ಥೆಗಳು ಮತ್ತು ಸರ್ಕಾರಗಳು ಲಸಿಕೆ ಹಾಕಿಸಿಕೊಳ್ಳದ ಜನರ ಮೇಲೆ ನಿರ್ಬಂಧಗಳನ್ನು ವಿಧಿಸಿರುವುದು ಸರಿಯಲ್ಲ. ಕೋವಿಡ್ ಪಾಸಿಟಿವ್ ಸಂಖ್ಯೆ ಕಡಿಮೆ ಇರುವವರೆಗೆ ರಾಜ್ಯ ಸರ್ಕಾರಗಳು ಅಂತಹ ನಿರ್ಬಂಧಗಳನ್ನು ತೆಗೆದುಹಾಕಬೇಕು ಎಂದು ಸೂಚಿಸಿತು.


ದೈಹಿಕ ಸ್ವಾಯತ್ತತೆ/ದೈಹಿಕ ಸಮಗ್ರತೆ ಸಾಂವಿಧಾನಿಕ ಹಕ್ಕು ಆದ್ದರಿಂದ ಯಾವುದೇ ವ್ಯಕ್ತಿಯನ್ನು ಲಸಿಕೆ ಹಾಕಿಸಿಕೊಳ್ಳುವಂತೆ ಬಲವಂತಪಡಿಸಲು ಸಾಧ್ಯವಿಲ್ಲ. ಕೋವಿಡ್-19 ವ್ಯಾಕ್ಸಿನೇಷನ್‌ನ ಪ್ರತಿಕೂಲ ಘಟನೆಗಳ ದತ್ತಾಂಶವನ್ನು ಸಾರ್ವಜನಿಕಗೊಳಿಸುವಂತೆಯೂ ಕೋರ್ಟ್ ಕೇಂದ್ರಕ್ಕೆ ನಿರ್ದೇಶಿಸಿದೆ.

- Advertisement -
spot_img

Latest News

error: Content is protected !!