Monday, June 8, 2026
Homeತಾಜಾ ಸುದ್ದಿಡಿಕೆಶಿ ವಿರುದ್ಧದ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆಯಾಜ್ಞೆ

ಡಿಕೆಶಿ ವಿರುದ್ಧದ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂ’ ತಡೆಯಾಜ್ಞೆ

- Advertisement -
- Advertisement -

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠದಿಂದ ತಡೆ ನೀಡಿದೆ. 2018ರಲ್ಲಿ ಡಿಕೆ ಶಿವಕುಮಾರ ಬಳಿ ಐಟಿ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಈಗಲ್‌ಟನ್ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿತ್ತು.

ಡಿಕೆ ಶಿವಕುಮಾರ ಇದ್ದ ರೂಂನಲ್ಲಿ ಹಣಕಾಸು ವರ್ಗಾವಣೆ ದಾಖಲೆ ವಶ ಪಡಿಸಿಕೊಳ್ಳಲಾಗಿತ್ತು. ಆದರೆ ಐಟಿ ತನಿಖೆಗೆ ಹೈಕೋರ್ಟ್‌ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ‘ಸುಪ್ರೀಂ’ ಮೊರೆ ಹೋಗಿತ್ತು.

- Advertisement -

Latest News

error: Content is protected !!