Wednesday, July 15, 2026
Homeಕರಾವಳಿಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು; ಸಂಸದ ನಳೀನ್ ಕುಮಾರ್ ಕಟೀಲ್ ಟ್ವೀಟ್

ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು; ಸಂಸದ ನಳೀನ್ ಕುಮಾರ್ ಕಟೀಲ್ ಟ್ವೀಟ್

- Advertisement -
- Advertisement -

ಮಂಗಳೂರು: ಸುರತ್ಕಲ್ ಟೋಲ್ ಸಂಗ್ರಹ ರದ್ದಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

Imp

ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಟೋಲ್ ರದ್ದುಪಡಿಸುವ ಸಂಬಂಧ ಕೆಲವು ದಿನಗಳ ಹಿಂದೆ ಸುರತ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು.

ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವ ಬಗ್ಗೆ ಸಂಸದ ನಳೀನ್ ಕುಮಾರ್ ಕಟೀಲ್ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!