Thursday, June 4, 2026
Homeತಾಜಾ ಸುದ್ದಿಮಂಗಳೂರು: ರಮಾನಾಥ ರೈ ವಿರುದ್ಧ ವೈಯಕ್ತಿಕ ತೇಜೋವಧೆ ಖಂಡನೀಯ: ಸುರತ್ಕಲ್ ಬ್ಲಾಕ್ ಕಾಂಗ್ರೆಸ್

ಮಂಗಳೂರು: ರಮಾನಾಥ ರೈ ವಿರುದ್ಧ ವೈಯಕ್ತಿಕ ತೇಜೋವಧೆ ಖಂಡನೀಯ: ಸುರತ್ಕಲ್ ಬ್ಲಾಕ್ ಕಾಂಗ್ರೆಸ್

- Advertisement -
- Advertisement -

ಮಂಗಳೂರು: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ವೈಯಕ್ತಿಕ ತೇಜೋವಧೆ ಮಾಡಿರುವುದು ಖಂಡನೀಯ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಕೇರಿ ಹೇಳಿದರು.

ರಮಾನಾಥ ರೈಯವರ ಸಾಧನೆ, ಅಭಿವೃದ್ಧಿ ಬಗ್ಗೆ ಮಾತನಾಡಲಿ. ಆದರೆ, ವಯಸ್ಸು ದೇಹ, ನಡೆ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಂಟ್ವಾಳದ ಈಗಿನ ಶಾಸಕರು ಕೂಡಾ ಒಳ್ಳೆಯವರೇ. ಹರಿಕೃಷ್ಣ ಬಂಟ್ವಾಳ ಅವರ ಬಗ್ಗೆ ನಮಗೆ ಗೌರವ ಇದೆ. ಅವರು ಬಿಲ್ಲವ ಸಮಾಜದ ಮುಖಂಡರು. ಆದರೆ ನಾರಾಯಣ ಗುರುಗಳಿಗೆ ಬಿಜೆಪಿ ಸರಕಾರ ಮಾಡಿದ ಅವಮಾನಗಳನ್ನು ಸಮರ್ಥಿಸುವುದು ಸರಿಯಲ್ಲ. ಅವರು ಬಿಲ್ಲವ ಮುಖಂಡರಾಗಿಯೇ ಇರಲಿ. ಬೇಕಾದರೆ ರಾಜಕೀಯ ನಿವೃತ್ತಿ ಘೋಷಿಸಲಿ ಎಂದು ಅವರು ಹೇಳಿದರು.

- Advertisement -

Latest News

error: Content is protected !!