Saturday, June 13, 2026
Homeತಾಜಾ ಸುದ್ದಿಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವು ವಿಚಾರ: ಧರಣಿ ಮುಂದೂಡುವಂತೆ ಹೋರಾಟ ಸಮಿತಿಯವರಿಗೆ ದ.ಕ.ಜಿಲ್ಲಾಧಿಕಾರಿ ಮನವಿ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವು ವಿಚಾರ: ಧರಣಿ ಮುಂದೂಡುವಂತೆ ಹೋರಾಟ ಸಮಿತಿಯವರಿಗೆ ದ.ಕ.ಜಿಲ್ಲಾಧಿಕಾರಿ ಮನವಿ

- Advertisement -
- Advertisement -

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವು ಧರಣಿ ಮುಂದೂಡುವಂತೆ ದ.ಕ.ಜಿಲ್ಲಾಧಿಕಾರಿ ಡಾ.ಕುಮಾರ್ ಮನವಿ ಮಾಡಿದ್ದಾರೆ.

ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಈ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುರತ್ಕಲ್ ಟೋಲ್ ಗೇಟ್ ತೆರವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿದೆ. ಸರ್ಕಾರ ಅಧಿಕೃತವಾಗಿ ಗೆಜೆಟ್ ನೋಟಿಫಿಕೇಷನ್ ಹೊರಡಿಸುವವರೆಗೂ ಧರಣಿಯನ್ನು ಮುಂದೂಡುವಂತೆ ಹೋರಾಟ ಸಮಿತಿಯ ಸದಸ್ಯರಿಗೆ ಸಲಹೆ ನೀಡಿದರು. ಗೆಜೆಟ್ ನೋಟಿಫಿಕೇಷನ್ ಹೊರಡಿಸುವವರೆಗೂ ಟೋಲ್ ಗೇಟ್ ತೆರವು ಸಮಿತಿಯವರು ತಾಳ್ಮೆಯಿಂದಿರಬೇಕು ಎಂದು ಹೇಳಿದ್ರು. ಪ್ರಕ್ರಿಯೆಗಳು ಅಂತಿಮ ಹಂತದಲ್ಲಿರೋದ್ರಿಂದ ಯಾವುದೇ ಪ್ರತಿಭಟನೆಯನ್ನು ಕೈಗೊಳ್ಳಬಾರದು. ತಪ್ಪಿದ್ದಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

- Advertisement -

Latest News

error: Content is protected !!