Thursday, July 16, 2026
Homeಕ್ರೀಡೆಮುಂಬೈನಲ್ಲಿ ಕ್ಲಬ್ ಮೇಲೆ ದಾಳಿ : ಕ್ರಿಕೆಟರ್ ಸುರೇಶ್ ರೈನಾ ಹಾಗೂ ಹೃತಿಕ್ ರೋಷನ್...

ಮುಂಬೈನಲ್ಲಿ ಕ್ಲಬ್ ಮೇಲೆ ದಾಳಿ : ಕ್ರಿಕೆಟರ್ ಸುರೇಶ್ ರೈನಾ ಹಾಗೂ ಹೃತಿಕ್ ರೋಷನ್ ಮಾಜಿ ಪತ್ನಿ ಅರೆಸ್ಟ್

- Advertisement -
- Advertisement -

ಮುಂಬೈ : ಇಲ್ಲಿನ ವಿಮಾನ ನಿಲ್ದಾಣದ ಬಳಿ ಇರುವ ಮುಂಬೈ ಡ್ರ್ಯಾಗನ್ ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿ ಭಾರತೀಯ ಕ್ರಿಕೆಟ್ ತಂಡದ ಹಿರಿಯ ಕ್ರಿಕೆಟಿಗ ಸುರೇಶ್ ರೈನಾ ಮತ್ತು ಗಾಯಕ ಗುರು ರಾಂಡವಾ ಅವರನ್ನು ಬಂಧಿಸಿದ್ದಾರೆ. ನಂತರ ಇಬ್ಬರೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ದಾಳಿಯಲ್ಲಿ ಮುಂಬೈ ಕ್ಲಬ್ ನ ಏಳು ಸಿಬ್ಬಂದಿ ಸೇರಿದಂತೆ ಒಟ್ಟು 34 ಮಂದಿಯನ್ನು ಬಂಧಿಸಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಈ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಗಾಯಕ ಗುರು ರಾಂಡವಾ ಮತ್ತು ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಸಹರ್ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ನಂತರ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34 ಜನರ ವಿರುದ್ಧ ಸೆಕ್ಷನ್ 188 (ಸಾರ್ವಜನಿಕ ಸೇವಕನಿಂದ ಆದೇಶ ಹೊರಡಿಸಲು ಅವಿಧೇಯತೆ), 269 (ಕಾನೂನು ಬಾಹಿರವಾಗಿ ಅಥವಾ ನಿರ್ಲಕ್ಷ್ಯತೋರಿದವರು) ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!