Thursday, June 4, 2026
Homeಕರಾವಳಿಬೆಳ್ತಂಗಡಿಯ ಸುರ್ಯ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ ನಿಧನ

ಬೆಳ್ತಂಗಡಿಯ ಸುರ್ಯ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ ನಿಧನ

- Advertisement -
- Advertisement -

ಮಂಗಳೂರು: ನಿವೃತ್ತ ಎಸಿಪಿ,  ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ದಿವಂಗತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ  ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

- Advertisement -

Latest News

error: Content is protected !!