Sunday, December 3, 2023
Homeಕರಾವಳಿಮಂಗಳೂರು: ಸುರತ್ಕಲ್ ನಲ್ಲಿ ಚೂರಿ ಇರಿತ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು: ಸುರತ್ಕಲ್ ನಲ್ಲಿ ಚೂರಿ ಇರಿತ ಪ್ರಕರಣ; ಮೂವರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ಸುರತ್ಕಲ್ ನಲ್ಲಿ ಚೂರಿ ಇರಿತ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೇಶ್ (22) ಬಂಧಿತರು. ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್‌ (23) ಎಂಬಾತನಿಗೆ ಚೂರಿಯಿಂದ ಇರಿಯಲಾಗಿತ್ತು.

ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿ, ‌ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.

ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು‌‌. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್‌ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!