Thursday, April 18, 2024
Homeಕರಾವಳಿಮಂಗಳೂರು ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ: ಇನ್ಸ್ ಪೆಕ್ಟರ್ ಕಬ್ಬಳ್ ರಾಜ್ ಸೇರಿ ಇಬ್ಬರು...

ಮಂಗಳೂರು ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ: ಇನ್ಸ್ ಪೆಕ್ಟರ್ ಕಬ್ಬಳ್ ರಾಜ್ ಸೇರಿ ಇಬ್ಬರು ಪೊಲೀಸರು ಅಮಾನತು

spot_img
- Advertisement -
- Advertisement -

ಮಂಗಳೂರು: ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿದ್ದ ಎಲಿಯ ಕನ್​ಸ್ಟ್ರಕ್ಷನ್ ಆಯಂಡ್ ಬಿಲ್ಡರ್ ಪ್ರೈ.ಲಿ ಸಂಸ್ಥೆಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್‌ ಕಾರನ್ನು ಸಿಸಿಬಿ ಪೊಲೀಸರು (ನಗರ ಅಪರಾಧ ಪತ್ತೆದಳ) ಮಾರಾಟ ಮಾಡಿದ್ದಾರೆನ್ನಲಾದ ಪ್ರಕರಣದಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಸಿಸಿಬಿಯ ಈ ಹಿಂದಿನ ಇನ್ಸ್ ಪೆಕ್ಟರ್ ಕಬ್ಬಳ್ ರಾಜ್ ಹಾಗೂ ಎಕನಾಮಿಕ್ ಆಯಂಡ್ ನಾರ್ಕೊಟಿಕ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಮಕೃಷ್ಞ ಅಮಾನತು ಮಾಡಲಾಗಿದೆ.

ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ 30 ಕೋಟಿ ರೂಪಾಯಿ ವಂಚಿಸಿದ್ದ ಎಲಿಯ ಕನ್​ಸ್ಟ್ರಕ್ಷನ್ ಆಯಂಡ್ ಬಿಲ್ಡರ್ ಪ್ರೈ.ಲಿ ಸಂಸ್ಥೆ ವಿರುದ್ಧ ಕೇಸ್​ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಸಿಬಿ ಪೊಲೀಸರು, ವಂಚನೆ ಬಂಧಿತರಾಗಿದ್ದ ಮೂವರು ಆರೋಪಿಗಳಿಂದ ಜಾಗ್ವಾರ್, ಬಿಎಂಡಬ್ಲ್ಯು, ಪೋರ್ಷೆ ಸೇರಿ ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು.

ತಮ್ಮ ವಶದಲ್ಲಿದ್ದ ಜಾಗ್ವಾರ್ ಕಾರನ್ನು ಮಂಗಳೂರಿನ ಸಿಸಿಬಿ ಅಧಿಕಾರಿಗಳು ಮಾರಾಟ ಮಾಡಿದ್ದಾರೆ. ಪೋರ್ಷೆ ಹಾಗು ಬಿಎಂಡಬ್ಲ್ಯು ಕಾರನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಡಿಸಿಪಿ ವಿನಯ್‌ ಗಾಂವ್ಕರ್‌ ಅವರು ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಪ್ರತಾಪ್‌ ರೆಡ್ಡಿ ಅವರಿಗೆ ಸಲ್ಲಿಸಿದ 35 ಪುಟಗಳ ಮಧ್ಯಂತರ ವರದಿಯಲ್ಲಿ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ವರದಿಯಲ್ಲಿ ನಾರ್ಕೋಟಿಕ್‌ ಆಯಂಡ್‌ ಎಕಾನಮಿ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ರಾಮಕೃಷ್ಣ, ನಗರ ಅಪರಾಧ ಪತ್ತೆ ದಳದ ಹಿಂದಿನ ಎಸ್‌ಐ ಕಬ್ಬಳ್‌ರಾಜ್‌, ಸಿಸಿಬಿ ಟೀಂನ ಆಶಿತ್‌, ರಾಜ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಅಲ್ಲದೆ ಪೊಲೀಸ್‌ ಬ್ರೋಕರ್‌ ದಿವ್ಯದರ್ಶನ್‌ ವಿರುದ್ಧ ಕೂಡ ಬೊಟ್ಟು ಮಾಡಲಾಗಿದೆ. ಕಳಂಕಿತ ಪೊಲೀಸರಲ್ಲಿ ಮೂವರು ಮಂಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿದ್ದರೆ, ಕಬ್ಬಳ್‌ರಾಜ್‌ ಚಿಕ್ಕಮಗಳೂರಿನಲ್ಲಿ ಇನ್ಸ್ ಪೆಕ್ಟರ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!