Wednesday, June 3, 2026
Homeಅಪರಾಧಕರ್ತವ್ಯ ಲೋಪ ಆರೋಪದ ಮೇಲೆ ಪ್ರಭಾರಿ ಮುಖ್ಯ ಶಿಕ್ಷಕಿಯ ಅಮಾನತು

ಕರ್ತವ್ಯ ಲೋಪ ಆರೋಪದ ಮೇಲೆ ಪ್ರಭಾರಿ ಮುಖ್ಯ ಶಿಕ್ಷಕಿಯ ಅಮಾನತು

- Advertisement -
- Advertisement -

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕು ಕಿತ್ತಲೆಗಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿಯನ್ನು ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಶಿಕ್ಷಕಿ ಎಚ್ಎಸ್ ಶೀಲರಾಣಿ ಎನ್ನಲಾಗಿದೆ.

ಈ ಕ್ರಮವನ್ನು ಶಾಲಾ ಸಮಯದಲ್ಲಿ ಅತಿಯಾದ ಮೊಬೈಲ್ ಬಳಕೆ, ಪಠ್ಯ ಚಟುವಟಿಕೆಗಳಲ್ಲಿ ನಿರುತ್ಸಾಹ, ಬಿಸಿಯೂಟ ಯೋಜನೆಯಲ್ಲಿ ಅವ್ಯವಹಾರ, ಲೆಕ್ಕಪತ್ರಗಳ ತಪ್ಪು ನಿರ್ವಹಣೆ ಆರೋಪದ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿದೆ.

ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಸ್ಥಳೀಯರು ಶಿಕ್ಷಕಿ ವಿರುದ್ಧ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದು, ತನಿಖೆಯಿಂದ ಆರೋಪಗಳು ಮೇಲ್ನೋಟಕ್ಕೆ ದೃಢ ಪಟ್ಟಿವೆ. 

- Advertisement -

Latest News

error: Content is protected !!