Saturday, June 6, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯದಲ್ಲಿ‌‌‌ ಸ್ವಚ್ಛತಾ ಹರಕೆ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ‌‌‌ ಸ್ವಚ್ಛತಾ ಹರಕೆ ಸೇವೆ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಹರಿಕೆ ಸೇವೆಯು ದೇವಸ್ಥಾನದ ಸುತ್ತಮುತ್ತಲಿನಲ್ಲಿ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಳದ ನೌಕರ ವೃಂದ, ದೇವಳದ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಗಳಾದ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜಗಳ ವಿದ್ಯಾರ್ಥಿಗಳು ಹಾಗು ಉಪನ್ಯಾಸಕರು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರು, ಆಡಳಿತ ಮಂಡಳಿ ಹಾಗೂ ಸ್ಥಳೀಯ ವರ್ತಕರು ಭಾಗವಹಿಸಿದ್ದರು.

ಸುಮಾರು 300ಕ್ಕೂ ಹೆಚ್ಚು ಭಕ್ತರು ಸ್ವಚ್ಛತಾ ಹರಿಕೆ ಸೇವೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿ ಏಕಾದಶಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಭಾಗವಾಗಿ ಸ್ವಚ್ಛತಾ ಹರಿಕೆ ಸೇವೆ ನಡೆಯಿತು.

- Advertisement -

Latest News

error: Content is protected !!