Friday, June 26, 2026
Homeತಾಜಾ ಸುದ್ದಿಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ: ಕೆ.ಎಸ್ ಈಶ್ವರಪ್ಪ ನಿವಾಸಕ್ಕೆ ಸ್ವಾಮೀಜಿಗಳು ಭೇಟಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ: ಕೆ.ಎಸ್ ಈಶ್ವರಪ್ಪ ನಿವಾಸಕ್ಕೆ ಸ್ವಾಮೀಜಿಗಳು ಭೇಟಿ

- Advertisement -
- Advertisement -

ಶಿವಮೊಗ್ಗ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್. ಈಶ್ವರಪ್ಪನವರ ಶಿವಮೊಗ್ಗದ ನಿವಾಸಕ್ಕೆ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು.

ನಿಯೋಗದಲ್ಲಿ ಅನೇಕ ಸ್ವಾಮೀಜಿಗಳಿದ್ದು, ಈಶ್ವರಪ್ಪರಿಗೆ ಸಮಾಧಾನದ ಮಾತುಗಳನ್ನಾಡಿದ್ದಾರೆ. ಹಾಗೆಯೇ ಮುಂದಿನ ವಿಚಾರಗಳ ಕುರಿತು ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದರು. ಇನ್ನು ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ , ಪ್ರತಿ ಹುಣ್ಣಿಮೆಯ ದಿನ ಮನೆಯಲ್ಲಿ ವಿಶೇಷ ಪೂಜೆ ಇರುತ್ತದೆ. ಇವತ್ತು ಸಹ ಹುಣ್ಣಿಮೆ ಪೂಜೆ ಜೊತೆಗೆ ಸತ್ಯನಾರಾಯಣ ಪೂಜೆ ಮಾಡುತ್ತಿದ್ದೆವು. ಇದೇ ವೇಳೆ 10ಕ್ಕೂ ಹೆಚ್ಚು ಶ್ರೀಗಳು ನಮ್ಮ ಮನೆಗೆ ಭೇಟಿ ಕೊಟ್ಟಿದ್ದಾರೆ. ಅವರು ಬರುವ ಕಲ್ಪನೆ ಸಹ ನನಗೆ ಇರಲಿಲ್ಲ. ಪೂಜೆಯ ಸಮಯಕ್ಕೆ ದೇವರ ರೀತಿ ಬಂದು ಅವರೆಲ್ಲರೂ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

ಯಾವ ಲೋಪವೂ ಇಲ್ಲದೇ, ನಿರ್ದೋಷಿಯಾಗಿ ಹೊರಗೆ ಬರ್ತೀರಾ ಎಂದು ಸ್ವಾಮೀಜಿಗಳು ಅಭಯ ನೀಡಿದ್ದಾರೆ. ನಾನೇನು ಕುಗ್ಗಿರಲಿಲ್ಲ. ನನಗೆ ಆನೆಬಲದಷ್ಟು ಧೈರ್ಯ ಬಂದಿದೆ. ಎಲ್ಲಾ ಶ್ರೀಗಳು ಆಶೀರ್ವಾದ ಮಾಡಿದ್ದು, ನನಗೆ ಪೂರ್ವ ಜನ್ಮದ ಪುಣ್ಯವಾಗಿದೆ. ಜೊತೆಗೆ ಮಂತ್ರಾಲಯದ ಶ್ರೀಗಳು ಕರೆ ಮಾಡಿದ್ದರು. ರಾಯರ ಭಕ್ತರು ನೀವು. ನಿಮಗೆ ಒಳ್ಳೆಯದಾಗುತ್ತದೆ ಎಂದು ಹರಸಿದ್ದಾರೆ ಎಂದು ತಿಳಿಸಿದರು.

- Advertisement -

Latest News

error: Content is protected !!