Wednesday, September 18, 2024
Homeಇತರತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದ್ದ ಇಂಡೊನೇಷ್ಯಾದ 10 ಮಂದಿ ಬಂಧನ

ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದ್ದ ಇಂಡೊನೇಷ್ಯಾದ 10 ಮಂದಿ ಬಂಧನ

spot_img
- Advertisement -
- Advertisement -

ಮುಂಬೈ : ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ತಬ್ಲಿಘಿ ಜಮಾತ್ ನ ಇಂಡೇನೇಷ್ಯಾದ 10 ಮಂದಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ಇಂಡೊನೇಷ್ಯಾದ ಒಟ್ಟು 12 ಜನ ಏಪ್ರಿಲ್ 1 ರಂದು ಪತ್ತೆಯಾಗಿದ್ದರು. ಈ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಬಾಂದ್ರಾದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಳಿದ 10 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು ಎಂದು ಮುಂಬೈಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತ 10 ಜನರು ತಬ್ಲಿಘಿ ಸಭೆಯಲ್ಲಿ ಭಾಗವಹಿಸಿದ್ದರು. ಬಳಿಕ ಮಾರ್ಚ್ 7 ರಂದು ಬಾಂದ್ರಾದ ಅಪಾರ್ಟ್ ಮೆಂಟ್ ಗೆ ಬಂದು ನೆಲೆಸಿದ್ದರು ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!