Thursday, June 4, 2026
Homeತಾಜಾ ಸುದ್ದಿಬಿಜೆಪಿ ಶಾಸಕನ ವಿರುದ್ಧ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪತ್ನಿ ದೂರು; ಎಫ್ ಐಆರ್ ದಾಖಲು

ಬಿಜೆಪಿ ಶಾಸಕನ ವಿರುದ್ಧ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪತ್ನಿ ದೂರು; ಎಫ್ ಐಆರ್ ದಾಖಲು

- Advertisement -
- Advertisement -

ಬೆಂಗಳೂರು: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಎಫ್ ಐಆರ್ ದಾಖಲಾಗಿದೆ.‌

ವಿಜಯಪುರದಲ್ಲಿ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ‌ ಇದೆ ಎಂದು ಹೇಳಿದ್ದರು.

ಯತ್ನಾಳ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಯತ್ನಾಳ್ ವಿರುದ್ಧ ದೂರು ನೀಡಿದ್ದು ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿರುದ್ಧ ಬೆಂಗಳೂರಿನ ಗಾಂಧಿನಗರ ಮತ್ತು ವಿಜಯಪುರದಲ್ಲಿ ಕೂಡಾ ಕಾಂಗ್ರೆಸ್ ಕಾರ್ಯಕರ್ತರಿಂದ ಪೊಲೀಸ್ ದೂರು ದಾಖಲಾಗಿದೆ.

- Advertisement -

Latest News

error: Content is protected !!