Thursday, June 4, 2026
Homeತಾಜಾ ಸುದ್ದಿಸರ್ಕಾರಿ ಅಧಿಕಾರಿಗಾಗಿ ಕಾದು ಕಾದು ವೃದ್ಧೆ ಕುಸಿದು ಬಿದ್ದ ಪ್ರಕರಣ: ಅಜ್ಜಿಯ ಮನೆಗೆ ತೆರಳಿ ಪಿಂಚಣಿಯ...

ಸರ್ಕಾರಿ ಅಧಿಕಾರಿಗಾಗಿ ಕಾದು ಕಾದು ವೃದ್ಧೆ ಕುಸಿದು ಬಿದ್ದ ಪ್ರಕರಣ: ಅಜ್ಜಿಯ ಮನೆಗೆ ತೆರಳಿ ಪಿಂಚಣಿಯ ಮಂಜೂರಾತಿ ಪತ್ರ ನೀಡಿದ ತಹಶೀಲ್ದಾರ್

- Advertisement -
- Advertisement -

ಶಿವಮೊಗ್ಗ:  ಗ್ರಾಮ ಲೆಕ್ಕಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಾಗಿ ಗಂಟೆಗಟ್ಟಲೆ ಕಾದು ಕುಸಿದು ಬಿದ್ದ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಅಜ್ಜಿಯ ಮನೆಗೆ ತೆರಳಿದ ತಹಶೀಲ್ದಾರ್ ಅವರು ಪತ್ರವನ್ನು ಹಸ್ತಾಂತರಿಸಿ ಆರೋಗ್ಯವನ್ನು ವಿಚಾರಿಸಿದರು. ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡುವವರ ವಿರುದ್ಧ ಕ್ರಮವನ್ನು ಜರುಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಸಂಬಂಧಪಟ್ಟ ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿಗೆ ಈಗಾಗಲೇ ನೊಟೀಸ್ ಜಾರಿಗೊಳಿಸಲಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದ್ದಾರೆ.

- Advertisement -

Latest News

error: Content is protected !!