- Advertisement -
- Advertisement -
ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮೇ 17 ರವರೆಗೆ ಮೂರನೇ ಹಂತದ ಲಾಕ್ಡೌನ್ ಜಾರಿಗೊಳಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.
ಇದರ ಮಧ್ಯೆಯೂ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಇಂತಹ ಕ್ರಮ ಕೈಗೊಂಡಿರುವುದಕ್ಕೆ ಪರ -ವಿರೋಧದ ಅಭಿಪ್ರಾಯಗಳು ಕೇಳಿಬರುತ್ತಿವೆ.
ಇದರ ಮಧ್ಯೆ ಅಧಿಕಾರಿಯೊಬ್ಬರು ಸಾರ್ವಜನಿಕರ ಎದುರೇ ಸಚಿವರ ಕಾಲಿಗೆ ಬಿದ್ದಿರುವ ಘಟನೆ ನಡೆದಿದೆ. ಶಿವಮೊಗ್ಗದ ತಹಶೀಲ್ದಾರರಾಗಿ ನಾಗರಾಜ್ ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದ್ದು, ಶುಕ್ರವಾರದಂದು ಸಚಿವ ಕೆ.ಎಸ್. ಈಶ್ವರಪ್ಪ ಬಡವರಿಗೆ ಆಹಾರದ ಕಿಟ್ ವಿತರಣೆ ಮಾಡುವ ಸಂದರ್ಭದಲ್ಲಿ ಅವರ ಕಾಲಿಗೆರಗಿದ್ದಾರೆ.
- Advertisement -