Wednesday, June 24, 2026
Homeಇತರಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿದ್ದ ವ್ಯಕ್ತಿ ನಾಪತ್ತೆ....! ನೇತ್ರಾವತಿ ನದಿಯಲ್ಲಿ ಮೃತ ದೇಹ ಪತ್ತೆ...!

ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿದ್ದ ವ್ಯಕ್ತಿ ನಾಪತ್ತೆ….! ನೇತ್ರಾವತಿ ನದಿಯಲ್ಲಿ ಮೃತ ದೇಹ ಪತ್ತೆ…!

- Advertisement -
- Advertisement -

ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಂಟ್ವಾಳ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಎಂದು ಗುರುತಿಸಲಾಗಿದೆ.

ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದು, ಇತ್ತೀಚೆಗೆ ಮಾನಸಿಕವಾಗಿ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರು ನ.25 ರಂದು ಬೆಳಿಗ್ಗೆ ಮನೆಯಿಂದ ಹೊರಟು ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದರು ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಶುಕ್ರವಾರ ಮಧ್ಯಾಹ್ನ ವೇಳೆ ನೇತ್ರಾವತಿ ನದಿಯಲ್ಲಿ ನಾರಾಯಣ ಮೂಲ್ಯರ ಶವ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.

- Advertisement -

Latest News

error: Content is protected !!