ಬೆಳ್ತಂಗಡಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 1 ತಿಂಗಳ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ತಣ್ಣೀರು ಪಂಥ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿ ಯಲ್ಲಿ ನಡೆಯಿತು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ ರಾಜ್ ತರಬೇತಿ ಉದ್ಘಾಟಿಸಿ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಶುಭ ಕೋರಿದರು.
ಇತ್ತೀಚಿನ ದಿನಗಳಲ್ಲಿ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿ ಗೆ ಹೆಚ್ಚಿನ ಬೇಡಿಕೆಯಿದ್ದು, ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು, ಅದೇ ರೀತಿ ತರಬೇತಿ ನಂತರ ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ, ತರಬೇತಿ ಯಲ್ಲಿ ಪಡೆದ ಕೌಶಲ್ಯ ವನ್ನು ಸ್ವ ಉದ್ಯೋಗ ಮಾಡುವಲ್ಲಿ ಪರಿವರ್ತನೆ ಮಾಡಲು ಕರೆ ನೀಡಿದರು. ವೇದಿಕೆ ಯಲ್ಲಿ ತಣ್ಣೀರು ಪಂಥ ಪಂಚಾಯತ್ ಅಧ್ಯಕ್ಷರಾದ ಹೇಮಾವತಿ, ತಣ್ಣೀರು ಪಂಥ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಜಯರಾಜ್ ಜೈನ್, ಬ್ರೈಡಲ್ ಮೇಕ್ಅಪ್ ತರಬೇತುದಾರರಾದ ಸಂಧ್ಯಾ, ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು. ಸ್ನೇಹ ಕಾರ್ಯಕ್ರಮ ನಿರೂಪಿಸಿ, ಸುಮ ಸ್ವಾಗತಿಸಿ, ಶಿಲ್ಪಾ ಧನ್ಯವಾದ ಗೈದರು.ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 30 ಮಹಿಳೆಯರು ಈ 01 ತಿಂಗಳ ತರಬೇತಿ ಪಡೆಯಲಿದ್ದಾರೆ.