Wednesday, May 8, 2024
Homeಕರಾವಳಿಉಡುಪಿಗಡಿಯಲ್ಲಿ ಕಟ್ಟೆಚ್ಚರ ವಹಿಸಿ: ದಕ್ಷಿಣ ಕನ್ನಡ ಡಿಸಿಗೆ ಸಿಎಂ ಆದೇಶ

ಗಡಿಯಲ್ಲಿ ಕಟ್ಟೆಚ್ಚರ ವಹಿಸಿ: ದಕ್ಷಿಣ ಕನ್ನಡ ಡಿಸಿಗೆ ಸಿಎಂ ಆದೇಶ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ವೀಡಿಯೋ ಕಾನ್ಫರೆನ್ಸ್ ಬಳಿಕ ಮಾತನಾಡಿದ ಸಿಎಂ ರೈಲು ನಿಲ್ದಾಣದಲ್ಲಿ, ಬಂದರುಗಳಲ್ಲಿಯೂ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೇರಳದಿಂದ ಶಿಕ್ಷಣ, ಉದ್ಯೋಗಕ್ಕೆಂದು ಪ್ರತಿದಿನ ಪ್ರಯಾಣಿಸುವವರಿಗೆ ಒಂದು ವಾರದ ಅವಧಿಗೆ ಪಾಸ್ ನೀಡುವ ವ್ಯವಸ್ಥೆ ಹಾಗೂ ಅವರಿಗೆ ಪ್ರತಿ ವಾರ ಪರೀಕ್ಷೆ ಮಾಡಿಕೊಳ್ಳುವುದು ಕಡ್ಡಾಯ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ ಸಿಎಂ, ಈ ಕುರಿತು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್ಟಿಪಿಸಿಆರ್ ಪರೀಕ್ಷೆಗಳ ಪ್ರಮಾಣ ಹೆಚ್ಚಿಸುವಂತೆ ನಿರ್ದೇಶನ ನೀಡಲಾಗಿದ್ದು, ಪ್ರವಾಸಿಗರು ಹೆಚ್ಚಾಗಿ ಆಗಮಿಸುವ ಕಾರಣ ಹೋಮ್ ಸ್ಟೇಗಳು, ರೆಸಾರ್ಟ್ ಗಳಲ್ಲಿ ಪರೀಕ್ಷೆ ನಡೆಸುವಂತೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!