Tuesday, May 14, 2024
Homeಕರಾವಳಿಮಂಗಳೂರು ವಿವಿ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆಗೆ ಹಿಂದೂ ಮುಖಂಡ ಅತಿಥಿ ಹಿನ್ನೆಲೆ ಕಾರ್ಯಕ್ರಮ ರದ್ದು ಆರೋಪ

ಮಂಗಳೂರು ವಿವಿ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆಗೆ ಹಿಂದೂ ಮುಖಂಡ ಅತಿಥಿ ಹಿನ್ನೆಲೆ ಕಾರ್ಯಕ್ರಮ ರದ್ದು ಆರೋಪ

spot_img
- Advertisement -
- Advertisement -

ಮಂಗಳೂರು; ವಿವಿ ಕಾಲೇಜು ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿಂದೂ ಮುಖಂಡ ಅತಿಥಿಯಾಗಿದ್ದಕ್ಕೆ ಅಪಸ್ವರ ಕೇಳಿಬಂದ ಹಿನ್ನೆಲೆಯಲ್ಲಿ ಕಾಲೇಜಿನ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎನ್ನಲಾಗಿದೆ.

ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ‌ ಜೂ.23 ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮುಖ್ಯ ಅತಿಥಿಯಾಗಿ ಆಗಮಿಸುವವರಿದ್ದರು. ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು.

ಅಂದ್ಹಾಗೆಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಿದ್ದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ಎಂದು ಆರೋಪಿಸಿ ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಎಂದು ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಅಲ್ಲದೇ ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್ ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದ್ರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು.ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನಿಯೋಗ ಮಂಗಳೂರು ಕಮಿಷನರ್ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ಇವರಿಂದ ಆಗುತ್ತದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ ಎಂದಿತ್ತು.‌ ಆದರೆ ಕಾಲೇಜು ಆಡಳಿತ ಕಾರ್ಯಕ್ರಮ ಮುಂದೂಡಿದೆ.

ಕಾರ್ಯಕ್ರಮ ಮುಂದೂಡಿದ ವಿವಿ

ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಆಡಳಿತ ಕಾರ್ಯಕ್ರಮ ಮುಂದೂಡಿದೆ. ನಾಳೆ ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಮುಂದೂಡಿಕೆ ಮಾಡಿದೆ. ನಾಳೆ ಎಂದಿನಂತೆ ತರಗತಿ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಇನ್ನು 2011ರಲ್ಲಿ ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ‌ ಪ್ರತಿಭಾ ದಿನಾಚರಣೆ ಹಾಗೂ ವಿವೇಕೋತ್ಸವಕ್ಕೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಮುಖ್ಯ ಅಥಿತಿಯಾಗಿ ಆಹ್ವಾನಿಸಲಾಗಿದ್ದು, ಕೊಣಾಜೆಯಲ್ಲಿರುವ ಮಂಗಳೂರು ವಿವಿ ಅವರನ್ನು ವಿವಿ ಕಾಲೇಜಿಗೆ ಬರದಂತೆ ಅಧಿಕೃತವಾಗಿ ತಡೆದಿತ್ತು. ಈ ಸಂದರ್ಭ ಅಂದಿನ ವಿದ್ಯಾರ್ಥಿ ನಾಯಕರಾದ ಶ್ರವಣ್ ಕುಮಾರ್ ನಾಳ ಗುರುಪ್ರಸಾದ್ ಉಳ್ಳಾಲ,  ಶಿವಪ್ರಸಾದ್ ನೇತೃತ್ವದಲ್ಲಿ ಸತತ 15 ದಿನ ತರಗತಿ ಸಹಿತ ಇಡೀ ಕಾಲೇಜು ಬಂದ್ ಮಾಡಲಾಗಿತ್ತು. ಪ್ರತಿಭಟನೆಯನ್ನು ನಿಯಂತ್ರಿಸಲು ಪ್ರತಿದಿನ 50ಪೊಲೀಸರನ್ನು ನಿಯೋಜಿಸಲಾಗಿತ್ತು. ಕೊನೆಗೆ ಪ್ರತಿಭಟನೆ ತಾರಕಕ್ಕೆ ಏರಿ ರಾಜಕೀಯ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತ ಮಂಗಳೂರು ವಿಶ್ವವಿದ್ಯಾಲಯ ಷರತ್ತು ವಿಧಿಸಿ ವಿವಿ ಕಾಲೇಜಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಆಗಮನಕ್ಕೆ ಅವಕಾಶ ನೀಡಿತ್ತು. ಈ ಬಾರಿ ಎಬಿವಿಪಿ ಮತ್ತು ಕಾಲೇಜು ಸಂಘದ ಮುಖಂಡರು ಅತಿಥಿ ಬದಲಾವಣೆ ಮಾಡಲ್ಲ ಎಂದು ಪಟ್ಟು ಹಿಡಿದಿದ್ದು, ನಾಳೆ ಕಾರ್ಯಕ್ರಮ ನಡೆಯದಿದ್ದರೂ ಮುಂದಿನ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿಯನ್ನೇ ಅತಿಥಿ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

- Advertisement -
spot_img

Latest News

error: Content is protected !!