
ಉಜಿರೆ: ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ, ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂನ್ 28ರಂದು ಉಜಿರೆಯ ಅನುಗ್ರಹ ಸಭಾಭವನದಲ್ಲಿ ಗೌರವ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಲ್ಲದೆ, ವಿದ್ಯಾರ್ಥಿಗಳ ಮತ್ತು ಪೋಷಕರ ಅನುಕೂಲಕ್ಕಾಗಿ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳನ್ನು ಆಧರಿಸಿ ಮೂರು ಪ್ರತ್ಯೇಕ ಸಮಯ ಹಾಗೂ ಸ್ಥಳಗಳಲ್ಲಿ ಈ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕರಾದ ಕೆ. ಮೋಹನ್ ಕುಮಾರ್, ಸೇಕ್ರೇಟ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ಎನ್. ಜೋಸೆಫ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಮಾಜಿ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಸೇರಿದಂತೆ ವಿವಿಧ ಸಿ.ಎ ಬ್ಯಾಂಕುಗಳ ಅಧ್ಯಕ್ಷರುಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಸಮೀಕ್ಷಾ ಶಿರ್ಲಾಲು ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.


