Monday, April 29, 2024
Homeತಾಜಾ ಸುದ್ದಿಮತ್ತೆ ಒಂದಾಗಲು ನಿರ್ಧರಿಸಿದ್ದಾರಾ ನಟ ಧನುಷ್ ಹಾಗೂ ಐಶ್ವರ್ಯಾ ರಜನಿಕಾಂತ್?

ಮತ್ತೆ ಒಂದಾಗಲು ನಿರ್ಧರಿಸಿದ್ದಾರಾ ನಟ ಧನುಷ್ ಹಾಗೂ ಐಶ್ವರ್ಯಾ ರಜನಿಕಾಂತ್?

spot_img
- Advertisement -
- Advertisement -

ಚೆನ್ನೈ; ಒಂಬತ್ತು ತಿಂಗಳ ಹಿಂದೆ ಅಭಿಮಾನಿಗಳಿಗೆ ಡಿವೋರ್ಸ್ ಶಾಕ್ ನೀಡಿದ್ದ ನಟ ಧನುಷ್ ಹಾಗೂ ಐಶ್ವರ್ಯಾ ರಜನಿಕಾಂತ್ ಇದೀಗ ದಸರಾ ಸಂಭ್ರಮದಲ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ತಮ್ಮ ವಿಚ್ಛೇದನವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಧನುಷ್ ಹಾಗೂ ಐಶ್ವರ್ಯಾ ಒಟ್ಟಿಗೆ ಇರಲು ಅವರನ್ನು ಮನವೊಲಿಸಲು ಅವರ ಕುಟುಂಬಗಳು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಧನುಷ್ ಅಥವಾ ಐಶ್ವರ್ಯ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.

ಸೂಪರ್‌ ಸ್ಟಾರ್ ರಜನಿಕಾಂತ್ ಅವರ ಮಗಳು ಐಶ್ವರ್ಯ ಅವರು 2004 ರಲ್ಲಿ ನಟ ಧನುಷ್ ಅವರನ್ನು ವಿವಾಹವಾದರು. ಅವರಿಗೆ ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

ನಾನೇ ವರುವೆನ್ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಧನುಷ್ ಮತ್ತು ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ತಮ್ಮ ವಿಚ್ಛೇದನವನ್ನು ರದ್ದುಪಡಿಸಿ ಮತ್ತೆ ಒಂದಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ಅವರು ಈ ವಿಷಯದ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. ಐಶ್ವರ್ಯಾ ಮತ್ತು ಧನುಷ್ ಈ ವರ್ಷದ ಆರಂಭದಲ್ಲಿ ತಮ್ಮ ಮದುವೆಯನ್ನು ಕೊನೆಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ಸುಮಾರು 18 ವರ್ಷಗಳ ದಾಂಪತ್ಯ ಜೀವನ ಕಡಿದುಕೊಳ್ಳುವುದಾಗಿ ಧನುಷ್ ಮತ್ತು ಐಶ್ವರ್ಯಾ ದಂಪತಿ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದರು. ಆದ್ರೆ, ಇದೀಗ ಅವರು ಮತ್ತೆ ಒಂದಾಗುವ ಕಾಲ ಸನಿಹದಲ್ಲಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅವರೇ ಮೌನ ಮುರಿಯಬೇಕಾಗಿದೆ.

- Advertisement -
spot_img

Latest News

error: Content is protected !!