Friday, April 26, 2024
Homeತಾಜಾ ಸುದ್ದಿವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಹೊಸ ಜಿಲ್ಲೆಗೆ ಸೇರಿರುವ ತಾಲೂಕುಗಳ ಪಟ್ಟಿ ಇಲ್ಲಿದೆ

ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಹೊಸ ಜಿಲ್ಲೆಗೆ ಸೇರಿರುವ ತಾಲೂಕುಗಳ ಪಟ್ಟಿ ಇಲ್ಲಿದೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದ್ದು, ಬಳ್ಳಾರಿ ಜಿಲ್ಲೆಯನ್ನು ಎರಡು ಜಿಲ್ಲೆಯನ್ನಾಗಿ ಇಬ್ಭಾಗ ಮಾಡಿ ಆದೇಶಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿರುವ ಕಾರಣ 6 ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ. ಹೊಸ ಜಿಲ್ಲೆಗೆ ಹೊಸಪೇಟೆ, ಕೊಟ್ಟೂರು, ಕೂಡ್ಲಗಿ, ಹರಪಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದರು.

ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಹಾಗೂ ಕುರಗೋಡು ಈ 5 ತಾಲೂಕುಗಳು ಬಳ್ಳಾರಿ ಜಿಲ್ಲೆಯ ತಾಲೂಕುಗಳಾಗಿ ಮುಂದುವರೆಯಲಿವೆ.

ವಿಜಯನಗರ ಜಿಲ್ಲೆ ರಚನೆಗೆ ಸಚಿವ ಆನಂದ್ ಸಿಂಗ್ ಒತ್ತಾಯ ಮಾಡಿದ್ದರು. ಆನಂದ್ ಸಿಂಗ್ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಬಳಿಕ 2019ರ ಸಪ್ಟೆಂಬರ್ ನಲ್ಲೇ ವಿಜಯನಗರ ನೂತನ ಜಿಲ್ಲೆಯ ಬಗ್ಗೆ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದರು. ಆದರೆ ಅದು ಅನುಷ್ಠಾನಕ್ಕೆ ಬಂದಿರಲಿಲ್ಲ. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ.

- Advertisement -
spot_img

Latest News

error: Content is protected !!