Wednesday, June 24, 2026
Homeಕರಾವಳಿಉಡುಪಿಉಡುಪಿ: ಕಾಂಗ್ರೆಸ್ ಮುಖಂಡ ಶರತ್ ಕುಂದರ್ ಮೇಲೆ ತಲ್ವಾರ್ ದಾಳಿ

ಉಡುಪಿ: ಕಾಂಗ್ರೆಸ್ ಮುಖಂಡ ಶರತ್ ಕುಂದರ್ ಮೇಲೆ ತಲ್ವಾರ್ ದಾಳಿ

- Advertisement -
- Advertisement -

ಉಡುಪಿ: ಉಡುಪಿ ಕಾಂಗ್ರೆಸ್ ನ NSUI ಉಪಾಧ್ಯಕ್ಷ ಶರತ್ ಕುಂದರ್ ಮೇಲೆ ತಲ್ವಾರ್ ದಾಳಿ ನಡೆದಿದೆ.ಕಲ್ಸಂಕ ಬಳಿಯಲ್ಲಿ ಯುವಕನ ಮೇಲೆ ತಲವಾರು ಮತ್ತು ಕಬ್ಬಿಣದ ಚಯರ್‌ನಿಂದ ಹಲ್ಲೆ ನಡೆಸಿದ ಘಟನೆ ತಡರಾತ್ರಿ ನಡೆದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಶರತ್ ಕುಂದರ್ ಅವರು ದೂರು ನೀಡಿದ್ದಾರೆ.  ಜ.30ರಂದು ಸಂಜೆ 9 ಗಂಟೆ ಸುಮಾರಿಗೆ ಸ್ನೇಹಿತನ ಗ್ರ್ಯಾಂಡ್ ವಿಟಾರಾ ಕಾರಿನಲ್ಲಿ ಮಣಿಪಾಲದ ಹಕುನಾ ಮಟಾಟ ಹೋಟೆಲ್‌ಗೆ ಊಟಕ್ಕೆ ತೆರಳುತ್ತಿದ್ದೆ. ಈ ವೇಳೆ ಹೋಟೆಲ್‌ನಲ್ಲಿ ನನ್ನ ಕೈ ಆರೋಪಿಗಳ ಪೈಕಿ ಒಬ್ಬರ ಕೈಗೆ ತಾಗಿದ ಹಿನ್ನೆಲೆಯಲ್ಲಿ ಮಾತಿನ ಗಲಾಟೆ ನಡೆದಿತ್ತು. ನಂತರ ಮನೆಗೆ ಮರಳುವಾಗ, ಉಡುಪಿ ಕಲ್ಸಂಕ ಬಳಿ ತಲುಪುವಾಗ ಅಕ್ಷತ್ ಪೈ ಎಂಬಾತ ಫೋನ್ ಮಾಡಿ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಬಗ್ಗೆ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ನಿಲ್ಲುವಂತೆ ತಿಳಿಸಿದ್ದಾನೆ.

ಅದರಂತೆ ಶರತ್ ಕುಂದರ್ ಹಾಗೂ ಸ್ನೇಹಿತರಾದ ಧ್ರುವಾ, ಸಿಲಾನ್ ಗಗನ್, ರೋಹಿತ್ ಜೊತೆಗೆ ಪಿಪಿಸಿ ಕ್ರಾಸ್ ಸಮೀಪದ ಕೋಸ್ಟಲ್ ಚಿಕನ್ ಅಂಗಡಿಯ ಎದುರು ರಸ್ತೆ ಬದಿಯಲ್ಲಿ ನಿಂತು ಮಾತನಾಡುತ್ತಿದ್ದಾಗ, ರಾತ್ರಿ 11.30ರ ಸುಮಾರಿಗೆ ಟಾಟಾ ಸಫಾರಿ ಹಾಗೂ ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಅಕ್ಷತ್ ಪೈ, ಶಶಾಂಕ್ ಸೇರಿದಂತೆ ಇನ್ನೂ 6–7 ಮಂದಿ ಏಕಾಏಕಿ ವಾಹನಗಳಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ಶರತ್ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳು ತಲವಾರಿನಂತಹ ಆಯುಧ ಹಾಗೂ ಕಬ್ಬಿಣದ ಚಯರ್ ಬಳಸಿ ಕೊಲೆ ಮಾಡುವ ಉದ್ದೇಶದಿಂದ ಶರತ್ ಕುಂದರ್ ಮೇಲೆ ದಾಳಿ ನಡೆಸಿದ್ದು, ತಲೆಗೆ ಬೀಸಿದಾಗ ತಪ್ಪಿಸಿಕೊಳ್ಳಲು ಕೈಗಳನ್ನು ಮುಂದಿಟ್ಟ ಶರತ್ ಕುಂದರ್ ಅವರಿಗೆ ಬಲ ಅಂಗೈ, ಮಧ್ಯ ಬೆರಳು ಹಾಗೂ ಎಡ ಕೈ ಮಣಿಕಟ್ಟು ಭಾಗದಲ್ಲಿ ರಕ್ತಗಾಯಗಳಾಗಿವೆ. ಹಲ್ಲೆಯ ವೇಳೆ “ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ,

- Advertisement -

Latest News

error: Content is protected !!