Sunday, June 7, 2026
Homeತಾಜಾ ಸುದ್ದಿಚೆನ್ನೈ: ಥರ್ಮಲ್ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ, 6 ಕಾರ್ಮಿಕರು ಸಾವು, 13 ಮಂದಿಗೆ ಗಾಯ

ಚೆನ್ನೈ: ಥರ್ಮಲ್ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ, 6 ಕಾರ್ಮಿಕರು ಸಾವು, 13 ಮಂದಿಗೆ ಗಾಯ

- Advertisement -
- Advertisement -

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಥರ್ಮಲ್ ವಿದ್ಯುತ್ ಘಟಕದಲ್ಲಿ ಬಾಯ್ಲರ್ ಸ್ಫೋಟವಾಗಿ ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಸುಮಾರು 13 ಮಂದಿ ತೀವ್ರ ಗಾಯಗೊಂಡ ಘಟನೆ ಇಂದು ನಡೆದಿದೆ.

ಚೆನ್ನೈಯಿಂದ 180 ಕಿಲೋ ಮೀಟರ್ ದೂರದ ಕಡಲೂರಿನಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್ ಎಲ್ ಸಿ ಇಂಡಿಯಾ ಲಿಮಿಟೆಡ್ ನ ವಿದ್ಯುತ್ ಘಟಕದಲ್ಲಿ ಈ ದುರುಂತ ಸಂಭವಿಸಿದೆ.

ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟ ಸಂಭವಿಸಿದಾಗ ಬಾಯ್ಲರ್ ಕೆಲಸ ಮಾಡುತ್ತಿರಲಿಲ್ಲ. ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿದ್ಯುತ್ ಸ್ಥಾವರದಲ್ಲಿ 3 ಸಾವಿರದ 940 ಮೆಗಾ ವ್ಯಾಟ್ ವಿದ್ಯುತ್ ಉತ್ಪತ್ತಿಯಾಗುತ್ತದೆ. ಸ್ಫೋಟ ಸಂಭವಿಸಿದ ಘಟಕದಲ್ಲಿ 1,470 ಮೆಗಾವ್ಯಾಟ್ ವಿದ್ಯುತ್ ಉತ್ಪತ್ತಿ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!