Wednesday, June 26, 2024
Homeತಾಜಾ ಸುದ್ದಿಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಜೀವಕ್ಕೆ ಆಪತ್ತು; ವೈ ಪ್ಲಸ್​ ಭದ್ರತೆ ಒದಗಿಸಿದ ಸರ್ಕಾರ

ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಜೀವಕ್ಕೆ ಆಪತ್ತು; ವೈ ಪ್ಲಸ್​ ಭದ್ರತೆ ಒದಗಿಸಿದ ಸರ್ಕಾರ

spot_img
- Advertisement -
- Advertisement -

ಚೆನ್ನೈ: ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಸದ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಿಕ್ಕಿದೆ.

ಅಣ್ಣಾಮಲೈ ಅವರಿಗೆ ಜೀವಬೆದರಿಕೆ ಕರೆಗಳು ಬರುತ್ತಿರುವ ಹಿನ್ನಲೆಯಲ್ಲಿ ಅವರಿಗೆ ವೈ ಪ್ಲಸ್​ ಭದ್ರತೆ ನೀಡಲಾಗಿದೆ. ಕೆಲ ಮಾವೋವಾದಿ ಮತ್ತು ಪಿಎಫ್​ಐ ಗುಂಪುಗಳಿಂದ ಬೆದರಿಕೆ ಬರುತ್ತಿರುವುದಾಗಿ ತಿಳಿದುಬಂದಿದೆ. ವೈ ಪ್ಲಸ್​ ಭದ್ರತೆ ಹಿನ್ನೆಲೆಯಲ್ಲಿ ಸದ್ಯ ಅವರ ಭದ್ರತೆಗೆ 11 ಜನ ಕಮಾಂಡೋಗಳು ಮತ್ತು ಇಬ್ಬರು ಗನ್​ ಮ್ಯಾನ್​ ಇರಲಿದ್ದು, ಅವರ ನಿವಾಸಕ್ಕೆ ಒಬ್ಬರು ಭದ್ರತೆಯನ್ನು ನಿಯೋಜಿಸಲಾಗಿದೆ.

10 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಬಳಿಕ ಅವರು ಮೇ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಬಳಿಕ ಬಿಜೆಪಿ ಪಕ್ಷ ಸೇರಿದ ಅವರು ತಮಿಳುನಾಡಿನಲ್ಲಿ ಸಕ್ರಿಯ ರಾಜಕಾರಣಿಯಾಗಿ ಗುರಿತಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಾಲಿವುಡ್​ ನಟಿ ಕಂಗನಾ ರಾನೌತ್ ಹಾಗೂ ಭಾರತದ ಮುಖ್ಯ ನ್ಯಾಯಾಮೂರ್ತಿ ಎಸ್​ಎ ಬೊಬ್ಡೇ ​ ಅವರಿಗೂ ಕೂಡ ವೈ ಪ್ಲಸ್​ ಭದ್ರತೆಯನ್ನು ನೀಡಲಾಗಿದೆ.

- Advertisement -
spot_img

Latest News

error: Content is protected !!