- Advertisement -


- Advertisement -
ಚೆನ್ನೈ: ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಮತ್ತು ಚಲನಚಿತ್ರ ನಟಿ ತ್ರಿಷಾ ಕುರಿತಾಗಿ ದ್ವಯಾರ್ಥ ಬರುವ ರೀತಿಯಲ್ಲಿ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಕಾವೇರಿ ಹೋರಾಟ ನಡೆಯುತ್ತಿದ್ದ ವೇಳೆ ಉದಯನಿಧಿ ಸ್ಟಾಲಿನ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂಬ ಟಿವಿಕೆ ಪಕ್ಷದ ದೂರಿನ ಹಿನ್ನೆಲೆಯಲ್ಲಿ ತಂಜಾವೂರು ಪೋಲಿಸರಿಂದ ಎಫ್‌ಐಆರ್ ದಾಖಲಾಗಿತ್ತು.
ನಿರೀಕ್ಷಣಾ ಜಾಮೀನು ಕೋರಿ ಮದ್ರಾಸ್ ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಮುಗಿದ ಬಳಿಕ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.
- Advertisement -


