Friday, August 7, 2026
Homeತಾಜಾ ಸುದ್ದಿಕಾವೇರಿ ನೀರು ಮತ್ತು ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಸರ್ವಪಕ್ಷಗಳ ಸಭೆ ಬೇಡಿಕೆ ತಿರಸ್ಕರಿಸಿದ ತಮಿಳುನಾಡು ಸಿಎಂ

ಕಾವೇರಿ ನೀರು ಮತ್ತು ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಸರ್ವಪಕ್ಷಗಳ ಸಭೆ ಬೇಡಿಕೆ ತಿರಸ್ಕರಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಚೆನ್ನೈ: ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ತಮಿಳುನಾಡು ವಿಧಾನಸಭೆಯಲ್ಲಿ ಗದ್ದಲ ಉಂಟಾಗಿದೆ. ಕರ್ನಾಟಕ ಯೋಜನೆಯನ್ನು ಮುಂದುವರಿಸುತ್ತಿದ್ದು, ತಮಿಳುನಾಡು ಒಗ್ಗಟ್ಟು ಪ್ರದರ್ಶಿಸಲಿ ಎಂದು ಆಗ್ರಹಿಸಿರುವ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್, ತಕ್ಷಣವೇ ಸರ್ವ ಪಕ್ಷಗಳ ಸಭೆ ಕರೆಯಲು ಒತ್ತಾಯಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಿಳುನಾಡು ಸಿಎಂ ಭೇಟಿಗೆ ನಿರಾಕರಿಸಿದ್ದಾರೆ, ಹೀಗಾಗಿ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಕರ್ನಾಟಕ ಪ್ರವಾಸ ಕೈಗೊಳ್ಳುತ್ತಾರೋ ಇಲ್ಲವೋ ಎಂಬುದನ್ನು ಸದನದಲ್ಲಿ ಸ್ಪಷ್ಟಪಡಿಸಿ ಎಂದೂ ಉದಯನಿಧಿ ಸ್ಟಾಲಿನ್ ಒತ್ತಾಯಿಸಿದ್ದಾರೆ.

ಇದೇ ವೇಳೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ವ ಪಕ್ಷಗಳ ಸಭೆ ಅಗತ್ಯವಿಲ್ಲ ಎಂದು ಹೇಳಿರುವ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ವಿಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.

ಕಾವೇರಿ ಮತ್ತು ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನ ನಿಲುವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಗಮನಕ್ಕೆ ತರಲಾಗಿದೆ, ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಯಾರೂ ಕೀಳುಮಟ್ಟದ ರಾಜಕೀ

- Advertisement -

Latest News

error: Content is protected !!