Wednesday, June 3, 2026
Homeಕರಾವಳಿಮಾಣಿ ಸಮೀಪ ಉರುಳಿ ಬಿದ್ದ ಅನಿಲ ತುಂಬಿದ ಟ್ಯಾಂಕರ್: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಮಾಣಿ ಸಮೀಪ ಉರುಳಿ ಬಿದ್ದ ಅನಿಲ ತುಂಬಿದ ಟ್ಯಾಂಕರ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ

- Advertisement -
- Advertisement -

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಬುಲೆಟ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.

ಸೂರಿಕುಮೇರು ಮಸೀದಿಯ ಸಮೀಪದ ತಿರುವಿನಲ್ಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಪರಿಣಾಮ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಇನ್ನು ಅನಿಲ ಸೋರಿಕೆ ನಿಯಂತ್ರಣ ತಂಡ ಹಾಗೂ ಅಗ್ನಿಶಾಮಕ ದಳ, ಪೊಲೀಸರು ಸ್ತಳಕ್ಕಾಗಮಿಸಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪರಿಸರದ ಮನೆಗಳಲ್ಲಿ ಬೆಂಕಿ ಉರಿಸದಂತೆ ಸೂರಿಕುಮೇರ್ ಮಸೀದಿಯ ಧ್ವನಿವರ್ಧಕದಲ್ಲಿ ಸೂಚನೆ ನೀಡಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

- Advertisement -

Latest News

error: Content is protected !!