Thursday, June 4, 2026
Homeತಾಜಾ ಸುದ್ದಿಬಂಟ್ವಾಳ: ಟ್ಯಾಂಕರ್‌ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ: ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ಸ್ಥಿತಿ...

ಬಂಟ್ವಾಳ: ಟ್ಯಾಂಕರ್‌ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ: ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ಸ್ಥಿತಿ ಗಂಭೀರ

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡ್ ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಇಂದು ಮಧ್ಯಾಹ್ನ ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಕಾರು ರಸ್ತೆಯ ಪಕ್ಕಕ್ಕೆ ಇಳಿದಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!