Saturday, May 18, 2024
HomeUncategorizedಬೆಳ್ತಂಗಡಿ :  ಅಪಘಾತವಾಗಿ ಗಾಯಗೊಂಡು ಸ್ಟೆಚ್ಚರ್ ನಲ್ಲೇ ಹೋಗಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ತನ್ವಿಗೆ 508...

ಬೆಳ್ತಂಗಡಿ :  ಅಪಘಾತವಾಗಿ ಗಾಯಗೊಂಡು ಸ್ಟೆಚ್ಚರ್ ನಲ್ಲೇ ಹೋಗಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ತನ್ವಿಗೆ 508 ಅಂಕ

spot_img
- Advertisement -
- Advertisement -

ಬೆಳ್ತಂಗಡಿ : ಪರೀಕ್ಷೆ ಬರೆಯಲು ತಾಯಿ ಜೊತೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ನಂತರ ಆಂಬ್ಯುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದು ಇನ್ನೊಬ್ಬಳ ಮೂಲಕ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ತನ್ವಿ ಒಟ್ಟು 508 ಅಂಕದೊಂದಿಗೆ 81% ಪಡೆದಿದ್ದಾಳೆ. ಅಪಘಾತದ ದಿನ ಪರೀಕ್ಷೆ ಬರೆದ ವಿಜ್ಞಾನ ಪರೀಕ್ಷೆಯಲ್ಲಿ 84 ಅಂಕ ಪಡೆದಿದ್ದಾಳೆ.

ಘಟನೆ ವಿವರ : ಬೆಳ್ತಂಗಡಿ ತಾಲೂಕಿನ ಲಾಯಿಲ  ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ SSLC ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಸಂಪಿಂಜಾ ನಿವಾಸಿ ಲಕ್ಷ್ಮಣ -ಮಮತಾ ದಂಪತಿಯ ಪುತ್ರಿ ತನ್ವಿ(15) ಎಪ್ರಿಲ್‌ 11 ರಂದು ಪರೀಕ್ಷೆ ಬರೆಯಲು ತನ್ನ ತಾಯಿ ಮಮತಾ ಜೊತೆ ಸ್ಕೂಟರ್ ನಲ್ಲಿ ಪರೀಕ್ಷಾ ಕೇಂದ್ರವಾದ ಬೆಳ್ತಂಗಡಿ ವಾಣಿ ಕಾಲೇಜ್ ಗೆ ಬರುತ್ತಿದ್ದಾಗ ಬೆಳ್ತಂಗಡಿಯ ಲಾಯಿಲದ ಪುತ್ರಬೈಲು ಅಂಗನವಾಡಿ ಎದುರು ಸ್ಕೂಟರ್ ಸ್ಕೀಡ್ ಆಗಿ ಪಲ್ಟಿಯಾಗಿದೆ. ಈ ವೇಳೆ ತಾಯಿ ಮಮತಾಗೆ ಯಾವುದೇ ಗಾಯವಾಗಿಲ್ಲ. ಮಗಳು ತನ್ವಿಗೆ ಮಾತ್ರ ಗಾಯವಾಗಿದ್ದು ತಕ್ಷಣ ಉಜಿರೆ ಬೆನಕ‌ ಆಸ್ಪತ್ರೆಗೆ ದಾಖಲಿಸಿ ವೈದ್ಯರು ಚಿಕಿತ್ಸೆ ನೀಡಿದ್ದು ಕೈ,ಕಾಲು ಹಾಗೂ ಮುಖಕ್ಕೆ ಗಾಯವಾಗಿದ್ದು ಯಾವುದೇ ಪ್ರಾಣಕ್ಕೆ ಅಪಾಯವಿಲ್ಲ ಎಂದು ವೈದ್ಯರು ಪರೀಕ್ಷೆ ಮಾಡಿ ತಿಳಿಸಿದ್ದರು. ಬಳಿಕ ತಾಯಿ ,  ಶಾಲಾ ಆಡಳಿತ ಮಂಡಳಿಗೆ ಕರೆ ಮಾಡಿ ಮಾಹಿತಿ ನೀಡಿದ ತಕ್ಷಣ ಆಸ್ಪತ್ರೆಗೆ ಬಂದು ವಿಚಾರಿಸಿ ನಂತರ ಪರೀಕ್ಷೆ ಬರೆಯಲು ಸಾಧ್ಯವಾಗದೆ ಇರುವುದರಿಂದ ಅದೇ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ದಾಖಲೆಗಳನ್ನು ನೀಡಿ ಆಕೆ ಹೇಳಿದಾಗೆ ಪರೀಕ್ಷೆ ಬರೆಯಲು ಅವಕಾಶ ನೀಡಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವಾಣಿ ಕಾಲೇಜಿನ ಪರೀಕ್ಷಾ ಮೇಲ್ವಿಚಾರರಿಗೆ ಮನವಿ ಮಾಡಲಾಯಿತು. ಅವರು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಟ್ಟಿದ್ದರು.

ವಿದ್ಯಾರ್ಥಿನಿ ತನ್ವಿ ಉತ್ತಮ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯಾಗಿದ್ದು ಅದಕ್ಕಾಗಿ ಕೊನೆಯ ಪರೀಕ್ಷೆ ಅಗಿರುವ ಕಾರಣ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಸೈಂಟ್ ಮೆರೀಸ್ ಆಂಗ್ಲಮಾಧ್ಯಮ ಶಾಲೆಯ 9 ನೇ ವಿದ್ಯಾರ್ಥಿನಿಯ ಮೂಲಕ ತನ್ವಿ ಸ್ಟಚ್ಚರ್ ನಲ್ಲಿಯೇ ಪರೀಕ್ಷಾ ಕೊಠಡಿಯಲ್ಲಿ ಮಲಗಿಕೊಂಡು ಆಕೆ ಹೇಳಿದ ಹಾಗೆ ಪಕ್ಕದಲ್ಲಿ ಕುಳಿತುಕೊಂಡು ಪರೀಕ್ಷೆ ಬರೆದು ಮುಗಿಸಿದ್ದಳು. ಅದಲ್ಲದೆ ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿಯವರು ತಾಯಿಯ ಜೊತೆ‌ಯಲ್ಲಿದ್ದು ಸಹಕರಿಸಿದ್ದರು. ಇದೀಗ ಫಲಿತಾಂಶ ಬಂದಿದ್ದು ಅಂತಹ ಕಷ್ಟದ ಪರಿಸ್ಥಿತಯಲ್ಲೂ ಪರೀಕ್ಷೆ ಬರೆದು ಆಕೆ 81 ಶೇಕಡಾ ಅಂಕ ಗಳಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ.

- Advertisement -
spot_img

Latest News

error: Content is protected !!