Saturday, April 27, 2024
Homeಕರಾವಳಿಉಡುಪಿಕಠಿಣ ತಪಸ್ವಿ, ಉಡುಪಿ ಮೂಲದ ತಪೋವನಿ ಮಾತಾಜಿ ಇನ್ನಿಲ್ಲ: ಮಾತಾಜಿ ನಿಧನಕ್ಕೆ ಗಣ್ಯರ ಸಂತಾಪ

ಕಠಿಣ ತಪಸ್ವಿ, ಉಡುಪಿ ಮೂಲದ ತಪೋವನಿ ಮಾತಾಜಿ ಇನ್ನಿಲ್ಲ: ಮಾತಾಜಿ ನಿಧನಕ್ಕೆ ಗಣ್ಯರ ಸಂತಾಪ

spot_img
- Advertisement -
- Advertisement -

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ಮಂತ್ರೋಪದೇಶ ಪಡೆದು ಸುಭದ್ರಾ ಎಂದು ಹೆಸರಿಸಲ್ಪಟ್ಟಿದ್ದ ಅಧ್ಯಾತ್ಮದ ಪಥದಲ್ಲಿ ಉನ್ನತ ಸಾಧನೆಗೈದಿದ್ದ ತಪೋವನಿ ಮಾತಾಜಿ ಯಾನೆ ಸುಭದ್ರಾ ಮಾತಾಜಿ ನಿನ್ನೆ ಹರಿದ್ವಾರದ ರಾಮಕೃಷ್ಣ ಆಶ್ರಮದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅಂದ್ಹಾಗೆ ಮಾತಾಜಿಯವರರು ಮೂಲತಃ ಉಡುಪಿಯ ಪಂದುಬೆಟ್ಟಿನವರಾಗಿದ್ದು,  ಮೂಲ ಹೆಸರು ವಾರಿಜಾಕ್ಷಿ. ಅವರಿಗೆ ಸುಮಾರು 89 ವರ್ಷ ವಯಸ್ಸಾಗಿತ್ತು. ಬಾಲ್ಯದಲ್ಲೇ ಅಧ್ಯಾತ್ಮದ ಸೆಳೆತಕೊಕ್ಕೊಳಗಾಗಿ ಉಡುಪಿಯ ಮಠ ಮತ್ತು ದೇವಾಲಯದ ಪರಿಸರದಲ್ಲೇ ಭಜನೆ ಪ್ರವಚನ ಸತ್ಸಂಗ ಮೊದಲಾದವುಗಳಲ್ಲಿ ಭಾಗಿಯಾಗುತ್ತಿದ್ದ ಸುಭದ್ರಾ  ಮುಂದೆ ಪೇಜಾವರ ಶ್ರೀಗಳಲ್ಲಿ ಮಂತ್ರೋಪದೇಶ ಪಡೆದು ಅಧ್ಯಾತ್ಮ ಸಾಧನೆಗಾಗಿ ಸುಮಾರು 50-60 ವರ್ಷಗಳ ಹಿಂದೆ ಬಹಳ ಕಷ್ಟ ಪಟ್ಟು ಉತ್ತರದ ಹಿಮಾಲಯ ಸೇರಿದ್ದರು.

ಹಿಮಾಲಯದ ಗಂಗೋತ್ರಿಯಿಂದಲೂ ಬಹಳ ಎತ್ತರದ ಪ್ರದೇಶ ಪಾಂಡವರು ತಪಸ್ಸಾಚರಿಸಿದ್ದ ತಪೋವನದಲ್ಲಿ ನಿರಂತರ ಅತ್ಯಂತ ಪ್ರತಿಕೂಲ ವಾತಾರವರಣದಲ್ಲೂ ನಿರಂತರ ಒಂಭತ್ತು ವರ್ಷಗಳ ಕಾಲ ತಪಸ್ಸಾಚರಿಸಿದ್ದರು.ಈ ಸಾಧನೆಗೈದ ಜಗತ್ತಿನ ಏಕೈಕ ಮಹಿಳೆ ಎನ್ನುವುದು ಹಿಮಾಲಯದ ನೂರಾರು ಸಾಧು ಸಂತರ ಅಭಿಪ್ರಾಯ‌. ಈ ಸಾಧನೆಯಿಂದಲೇ ಹಿಮಾಲಯ ಪ್ರದೇಶದಲ್ಲಿ ತಪೋವನೀ ಮಾ ಎಂದೇ ಪ್ರಸಿದ್ಧರಾಗಿದ್ದರು . ಆ ಬಳಿಕ ಹಿಮಾಲಯದ ಪ್ರದೇಶದಲ್ಲೇ ಆಶ್ರಮವೊಂದನ್ನು ತೆರೆದು ಸಾಧುಗಳಿಗೆ ಯಾತ್ರಿಗಳಿಗೆ ಊಟೋಪಚಾರ, ಆರೋಗ್ಯ ಸೇವೆಗಳನ್ನು ನಡೆಸುತ್ತಿದ್ದರು . ತೀವ್ರ ಅನಾರೋಗ್ಯಕ್ಕೊಳಗಾದ ಬಳಿಕ ಹರಿದ್ವಾರದ ಆಚಾರ್ಯ ಬಾಲಕೃಷ್ಣ ಅವರ ವಿಶೇಷ ಮುತುವರ್ಜಿಯಲ್ಲಿ  ಅಲ್ಲಿನ ರಾಮಕೃಷ್ಣ ಆಶ್ರಮ ಆಸ್ಪತ್ರೆಯಲ್ಲಿ ಅನೇಕ ವರ್ಷಗಳಿಂದ  ಚಿಕಿತ್ಸೆ ಪಡೆಯುತ್ತಿದ್ದರು . ನಿನ್ನೆ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ,

ಇನ್ನು ತಫೋವನೀ ಮಾ ನಿಧನಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ . ಉಡುಪಿ ಕೃಷ್ಣ ಮತ್ತು ತಮ್ಮ ಗುರುಗಳಲ್ಲಿ  ಅನನ್ಯ  ಶ್ರದ್ಧೆ ಭಕ್ತಿ ಯನ್ನು ಹೊಂದಿದ್ದ ಮಾತಾಜಿಯವರು ಕಠೋರ ಅಧ್ಯಾತ್ಮ ತುಡಿತದಿಂದ ಮಾಡಿದ ಸಾಧನೆ ಮಾದರಿಯಾದುದು. ಅವರ ಆತ್ಮಕ್ಕೆ ಶ್ರೀ ಕೃಷ್ಣನು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ . ಕೇಂದ್ರದ ಮಾಜಿ ಮಂತ್ರಿ ಉಮಾ ಭಾರತಿ , ಪ್ರೊ ಭಾಸ್ಕರ ಮಯ್ಯ ಎಂ, ಪೇಜಾವರ ಮಠದ ದಿವಾನ  ರಘುರಾಮಾಚಾರ್ಯ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶಾಮಲಾ ಕುಂದರ್ , ವಾಸುದೇವ ಭಟ್ ಪೆರಂಪಳ್ಳಿ ಹಾಗೇ ಮಾತಾಜಿಯ ಪೂರ್ವಾಶ್ರಮದ ಸಂಬಂಧಿ, ಬಿಜೆಪಿ ಮುಖಂಡ ಬಾಲಕೃಷ್ಣ ವಿ ಶೆಟ್ಟಿ ಸವಣಾಲು ಅವರು ಕೂಡ ತಪೋವನಿ ಮಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!