- Advertisement -
- Advertisement -
ಅರಂತೋಡು ಎ-23: ಅರಂತೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಂತೋಡು ಮತ್ತು ತೊಡಿಕಾನ ಗ್ರಾಮಗಳ ಕೋ ವಿಡ್ 19 ಟಾಸ್ಕ್ ಫೋರ್ಸ್ ಸಮಿತಿಗಳ ಜಂಟಿ ಸಭೆಯನ್ನು ಗ್ರಾಮ ಪಂಚಾಯಿತಿನಲ್ಲಿ ನಡೆಸಲಾಯಿತು. ಗ್ರಾಪಂ ಅಧ್ಯಕ್ಷರಾದ ಲೀಲಾವತಿ ಕೊಡಂಕಿರಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು .
ಸಭೆಯಲ್ಲಿ ಚರ್ಚಿಸಿದ ಪ್ರಮುಖ ವಿಷಯಗಳು
- ಸಭೆಯಲ್ಲಿ ಕೊರೋನಾ ಬಗ್ಗೆ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ
- ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೇಷನ್ ಸಿಗದ ಕುಟುಂಬಗಳಿಗೆ ರೇಷನ್ ವಿತರಣೆ ಕುರಿತು ಚರ್ಚೆ
- ಗ್ರಾಮದ ಜನತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಇರುವುದರಿಂದ ಕ್ರಮ ವಹಿಸುವ ಕುರಿತು ಚರ್ಚೆ
ಹಾಗೆಯೆ ಕೊರೋನಾ ವಿರುದ್ಧ ಯೋಧರಂತೆ ತಳಹಂತದಲ್ಲಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತೆಯರನ್ನು ಈ ಸಭೆಯಲ್ಲಿ ಅಭಿನಂದಿಸಲಾಯಿತು. ಶಾಸಕರು,ಗ್ರಾಮ ಪಂಚಾಯತ್ ಮತ್ತು ಕೃಷಿ ಪತ್ತಿನ ಸಹಕಾರಿ ಸಂಘ ಅರಂತೋಡು ನೀಡಿರುವ ಕಿಟ್ ಗಳನ್ನು ಆಶಾ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸಲಾಯಿತು.
- Advertisement -