ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಣಿ, ಬರಿಮಾರು ಹಾಗೂ ಪೆರಾಜೆ ಗ್ರಾಮ ಪಂಚಾಯತ್‌ಗಳಲ್ಲಿ ಕೊರೊನಾ ವಿರುದ್ಧ ಹೋರಾಡಲು ರಚನೆಗೊಂಡಿರುವ ಟಾಸ್ಕ್ ಫೋರ್ಸ್ ಸಮಿತಿಗಳ ಸದಸ್ಯರ ಸಭೆ ಇಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಆಯಾಯ ಪಂಚಾಯತ್‌ಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಆಶಾ ಕಾರ್ಯಕರ್ತೆಯರು ಮನೆ ಭೇಟಿ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆಯೇ ಎಂದು ವಿಚಾರಿಸಿದರು. ನ್ಯಾಯ ಬೆಲೆ ಅಂಗಡಿಗಳಲ್ಲಿ ಸಮರ್ಪಕ ಅಕ್ಕಿ ವಿತರಣೆಗೆ ಕ್ರಮಕೈಗೊಳ್ಳುವಂತೆ ಶಾಸಕರು ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ರಶ್ಮಿ, ಜಿ.ಪಂ.ಸದಸ್ಯರಾದ ಮಂಜುಳಾ ಮಾವೆ, ಕಮಲಾಕ್ಷಿ ಪೂಜಾರಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಕಾರ್ಯನಿರ್ವಹಣಾಽಕಾರಿ ರಾಜಣ್ಣ, ಬರಿಮಾರು ಗ್ರಾ.ಪಂ.ಅಧ್ಯಕ್ಷ ವಸಂತ, ಮಾಣಿ ಗ್ರಾ.ಪಂ.ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ, ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಽಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.