Saturday, June 6, 2026
Homeತಾಜಾ ಸುದ್ದಿಕಾಶ್ಮೀರ್ ಫೈಲ್ಸ್ ಸಿನಿಮಾಗೆ ರಾಜ್ಯದಲ್ಲಿ ಟ್ಯಾಕ್ಸ್ ಫ್ರೀ!

ಕಾಶ್ಮೀರ್ ಫೈಲ್ಸ್ ಸಿನಿಮಾಗೆ ರಾಜ್ಯದಲ್ಲಿ ಟ್ಯಾಕ್ಸ್ ಫ್ರೀ!

- Advertisement -
- Advertisement -

ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ರಾಜ್ಯದ ಸಿನಿಮಾ ಮಂದಿರಗಳಲ್ಲಿ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಘೋಷಿಸಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇಂದು ಸಂಜೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದ ಸಿನಿಮಾವನ್ನು ಪಕ್ಷದ ಸೂಚನೆ ಮೇರೆಗೆ ಇಂದು ಸಿಎಂ ವೀಕ್ಷಣೆ ಮಾಡಿದ್ದರು

ರಾಜ್ಯದ ಜನರನ್ನು ಸಿನಿಮಾ ವೀಕ್ಷಣೆ ಮಾಡಲು ಉತ್ತೇಜಿಸುವ ಸಲುವಾಗಿ ತೆರಿಗೆ ವಿನಾಯಿತಿ ನೀಡಲಾಗುತ್ತಿದೆ ಎಂದು ಸಿಎಂ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!