Friday, November 6, 2026
Homeಪ್ರಮುಖ-ಸುದ್ದಿನ. 11ರಿಂದ  ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕರ ಅನಿರ್ದಿಷ್ಟಾವಧಿ ಧರಣಿ

ನ. 11ರಿಂದ  ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕರ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಹಾಗೂ ಅವೈಜ್ಞಾನಿಕವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಟ್ಯಾಕ್ಸಿ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 11ರಿಂದ ಕೆಂಜಾರಿನ ವಿಮಾನ ನಿಲ್ದಾಣದ ಮುಖ್ಯ ಪ್ರವೇಶ ದ್ವಾರದ ಬಳಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಟ್ಯಾಕ್ಸಿ ಚಾಲಕರ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ನೀಡಿದ್ದ ಗಡುವು ಮುಕ್ತಾಯಗೊಂಡಿದ್ದರೂ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಇತ್ತೀಚೆಗೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲೂ ಸಮಸ್ಯೆಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಹೋರಾಟವನ್ನು ತೀವ್ರಗೊಳಿಸಲು ಸಂಘಟನೆಗಳು ನಿರ್ಧರಿಸಿವೆ.

ಈ ಸಂಬಂಧ ಉಭಯ ಜಿಲ್ಲೆಗಳ ಟ್ಯಾಕ್ಸಿ ಸಂಘಟನೆಗಳ ಮುಖಂಡರ ನಿಯೋಗವು ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರನ್ನು (ಎಸಿಪಿ) ಭೇಟಿ ಮಾಡಿ ಧರಣಿ ನಡೆಸಲು ಅಗತ್ಯವಾದ ಕಾನೂನು ಅನುಮತಿ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಸಂಘದ ಅಧ್ಯಕ್ಷ ರಘುಪತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಆನಂದ ಕೆ., ಪ್ರಧಾನ ಕಾರ್ಯದರ್ಶಿ ಜಯಂತ್ ಕೋಟ್ಯಾನ್ ಸೇರಿದಂತೆ ಪದಾಧಿಕಾರಿಗಳಾದ ಹರೀಶ್ ಶೆಟ್ಟಿ, ರೋಶನ್ ಕಿನ್ನಿಗೋಳಿ, ಸಂತೋಷ್ ಕೊಲ್ಯ ಹಾಗೂ ಪ್ರಕಾಶ್ ಸರಳಾಯ ಉಪಸ್ಥಿತರಿದ್ದರು.

- Advertisement -

Latest News

error: Content is protected !!