Tuesday, November 17, 2026
Homeಕರಾವಳಿಮಂಗಳೂರು ವಿಮಾನ ನಿಲ್ದಾಣದ ಶುಲ್ಕದ ವಿರುದ್ಧ ಟ್ಯಾಕ್ಸಿ ಸಂಘಟನೆಗಳ ಅನಿರ್ದಿಷ್ಟಾವಧಿ ಧರಣಿ

ಮಂಗಳೂರು ವಿಮಾನ ನಿಲ್ದಾಣದ ಶುಲ್ಕದ ವಿರುದ್ಧ ಟ್ಯಾಕ್ಸಿ ಸಂಘಟನೆಗಳ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳಿಗೆ ವಿಧಿಸಲಾಗುತ್ತಿರುವ ಅವೈಜ್ಞಾನಿಕ ಶುಲ್ಕ ಹಾಗೂ ದಬ್ಬಾಳಿಕೆಯನ್ನು ವಿರೋಧಿಸಿ ಟ್ಯಾಕ್ಸಿ ಸಂಘಟನೆಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲು ಮುಂದಾಗಿವೆ.

ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಸೇರಿದಂತೆ ಉಭಯ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸಿವೆ.

ಈ ಧರಣಿ ಸತ್ಯಾಗ್ರಹದ ಕುರಿತು ಮಾಜಿ ಉಡುಪಿ ಶಾಸಕ ರಘುಪತಿ ಭಟ್ ಮಾತನಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

Latest News

error: Content is protected !!