Saturday, May 18, 2024
Homeಕರಾವಳಿಉಡುಪಿಉಡುಪಿ: ಹಿಜಾಬ್ ಹಾಕಿದ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿದ ಶಿಕ್ಷಕರು !

ಉಡುಪಿ: ಹಿಜಾಬ್ ಹಾಕಿದ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿದ ಶಿಕ್ಷಕರು !

spot_img
- Advertisement -
- Advertisement -

ಉಡುಪಿ: ಹಿಜಾಬ್ ಹಾಕಿದ್ದಾರೆ ಎಂದು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿರುವ ಘಟನೆ ನಡೆದಿದೆ.

ಈ ಕುರಿತು ವಿದ್ಯಾರ್ಥಿಗಳು , ಹಿಂದು ಧರ್ಮದಲ್ಲಿ ಕುಂಕುಮ ಇಡುವಂತೆ ಮುಸ್ಲಿಂ ಧರ್ಮದಲ್ಲಿ ಹಿಜಾಬ್ ಹಾಕುತ್ತೇವೆ. ಇದಕ್ಕೆ ಇಲ್ಲಿ ವಿರೋಧಿಸಿದ್ದಾರೆ ಸರಕಾರಿ ಶಾಲೆಯಲ್ಲಿಯೇ ಈ ರೀತಿಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಇದು ಯಾವ ಸಮಾನತೆ ಎಂದು ಪ್ರಶ್ನಿಸಿದ್ದಾರೆ.

ಹಿಜಾಬ್ ಧರಿಸುವುದು ನಮ್ಮ ಸಂಸ್ಕೃತಿ. ನಮಗೆ ಹಿಜಾಬ್ ಧರಿಸಲು ಅನುಮತಿ ನೀಡಿ , ನಮಗೆ ನಮ್ಮ ಹಕ್ಕು ನೀಡಿ ಎಂದು ಕೇಳಿಕೊಂಡಿದ್ದಾರೆ. ಹಾಗೂ 3 ದಿನಗಳಿಂದ ಕಾಲೇಜಿಗೆ ಬರುತ್ತಿದ್ದೇವೆ ಆದರೆ ನಮ್ಮನ್ನು ತರಗತಿಗೂ ಬಿಡುತ್ತಿಲ್ಲ . ಹಾಜರಾತಿಯೂ ನೀಡುತ್ತಿಲ್ಲ . 3 ದಿನಗಳಿಂದ ಹೊರಗೆ ಇದ್ದೇವೆ ಎಂದಿದ್ದಾರೆ. ಈ ಬಗ್ಗೆ ಪೋಷಕರನ್ನು ಕರೆದುಕೊಂಡು ಬನ್ನಿ ಎಂದು ಹೇಳುತ್ತಾರೆ. ಪೋಷಕರು ಬಂದರೆ ಅವರ ಬಳಿಯೂ ಮಾತನಾಡದೆ ಕೆಲಸದ ನೆಪ ಹೇಳಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ .

ಅಲ್ಲದೆ ಹಿಜಾಬ್ ಹಾಕಿದ್ದರೆ ಎಂಬ ಕಾರಣಕ್ಕೆ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಇತ್ತೀಚೆಗೆ ಶಿಕ್ಷಕ ಪ್ರಕಾಶ್ ವಿದ್ಯಾರ್ಥಿಗಳನ್ನು ಕರೆದು ಕಾಲೇಜು ಆವರಣದಲ್ಲಿ ಉರ್ದು , ಬ್ಯಾರಿ ಭಾಷೆ ಮಾತನಾಡುವಂತಿಲ್ಲ ಸಲಾಮ್ ಮಾಡುವಂತಿಲ್ಲ ಹಾಗೂ ಯಾವುದೇ ಮುಸ್ಲಿಂ ಧರ್ಮದ ಆಚರಣೆ ಮಾಡುವಂತಿಲ್ಲ ಹೇಳಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ .

ನಮ್ಮಲ್ಲಿ ಈ ವರೆಗೆ ಹಿಜಾಬ್ ಹಾಕಿಕೊಂಡು ತರಗತಿಗೆ ಹಾಜರಾಗುವ ನಿಯಮ ಇರಲಿಲ್ಲ . ಕಳೆದ ಮೂರು ದಿನಗಳಿಂದ ಸುಮಾರು 60 ಮಂದಿ ವಿದ್ಯಾರ್ಥಿಗಳಲ್ಲಿ ಕೆಲವು ಮಂದಿ ಮಾತ್ರ ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಅವರ ಮನೆಯವರನ್ನು ಕರೆದು ಮಾತುಕತೆ ಮಾಡಿದ್ದೇವೆ ಅವರೆಲ್ಲರೂ ಅರ್ಥ ಮಾಡಿಕೊಂಡು ಒಪ್ಪಿದ್ದಾರೆ ಇದಕ್ಕೆ ಎಂಡು ಕಾಲೇಜಿನ ಪ್ರಾಂಶುಪಾಲ ರುದ್ರೆಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ

- Advertisement -
spot_img

Latest News

error: Content is protected !!