Thursday, June 4, 2026
Homeಕರಾವಳಿಉಡುಪಿಕಾರ್ಕಳ; ಕೆಲಸಕ್ಕೆ ಹೋಗಲು ಆಗ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಶಿಕ್ಷಕಿ ಆತ್ಮಹತ್ಯೆ

ಕಾರ್ಕಳ; ಕೆಲಸಕ್ಕೆ ಹೋಗಲು ಆಗ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಶಿಕ್ಷಕಿ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ; ಕೆಲಸಕ್ಕೆ ಹೋಗಲು ಆಗ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈದು ಗ್ರಾಮದಲ್ಲಿ ನಡೆದಿದೆ. ಪ್ರಸನ್ನಾ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ.

ಮೂಡಬಿದ್ರೆಯವರಾದ ಪ್ರಸನ್ನ ಈದು ಗ್ರಾಮದ ರಾಜೇಶ್ ಎಂಬವರನ್ನು 2022ರಲ್ಲಿ ಮದುವೆ ಆಗಿದ್ದರು. ಇನ್ನು ರಾಜೇಶ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತ ಪ್ರಸನ್ನಾ ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಂಪತಿಗೆ 10 ತಿಂಗಳ ಹೆಣ್ಣು ಮಗುವಿದೆ.

ಆದರೆ ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು ನಾನು ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಪ್ರಸನ್ನ ಆಗಾಗ್ಗೆ ಬೇಸರ ಮಾಡಿಕೊಳ್ಳುತ್ತಿದ್ದರಂತೆ. ಇನ್ನು ಖಿನ್ನತೆಗೊಳಗಾಗಿದ್ದ ಅವರಿಗೆ ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಹೀಗಿರುವಾಗಲೇ ನ. 6ರಂದು ಗಂಡನ ಮನೆಯ ಡೈನಿಂಗ್ ಹಾಲ್ ನಿಂದ ಮಹಡಿಗೆ ಹೋಗುವ ಮೆಟ್ಟಿಲಿನ ಸ್ಟೀಲ್ ರಾಡಿಗೆ ಚೂಡಿದಾರ ಶಾಲ್ ನಿಂದ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Latest News

error: Content is protected !!