Friday, June 2, 2023
Homeಇತರಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ, ಸಚಿವರ ಸೂಚನೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ, ಸಚಿವರ ಸೂಚನೆ

- Advertisement -
- Advertisement -

ಬೆಂಗಳೂರು: ಕೂಡಲೇ ನಿಯಮಾವಳಿಯನ್ನು ಅಂತಿಮಗೊಳಿಸಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಳೆದ ಬಜೆಟ್ ಅಧಿವೇಶನದಲ್ಲಿ ಅನುಮೋದನೆ ಪಡೆದುಕೊಂಡಿರುವ ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆ ಅನ್ವಯ ಪ್ರಸಕ್ತ ಶೈಕ್ಷಣಿಕ ಸಾಲಿನ ವರ್ಗಾವಣೆ ವೇಳಾಪಟ್ಟಿಗೆ ಸಂಬಂಧಿಸಿದ ಪ್ರಕ್ರಿಯೆಗೆ ಚಾಲನೆ ನೀಡಲು ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಯುಟ್ಯೂಬ್ ಚಾನೆಲ್ ನಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿ ಮೂಲಕ ಅಗತ್ಯ ಮಾಹಿತಿ ನೀಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಮುಂದಿನ ಶೈಕ್ಷಣಿಕ ಸಾಲಿನ ಅವಧಿ ಮತ್ತು ಕೆಲವು ಶಾಲೆಗಳಲ್ಲಿ ಆನ್ಲೈನ್ ತರಗತಿ ನಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

Latest News

error: Content is protected !!