Thursday, June 4, 2026
Homeತಾಜಾ ಸುದ್ದಿಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಮೂರು ವರ್ಷದ ಬಾಲಕ: ಬಾಲಕನ ಗುಪ್ತಾಂಗಕ್ಕೆ ಬೆಂಕಿ ಇಟ್ಟ...

ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಮೂರು ವರ್ಷದ ಬಾಲಕ: ಬಾಲಕನ ಗುಪ್ತಾಂಗಕ್ಕೆ ಬೆಂಕಿ ಇಟ್ಟ ಅಂಗನವಾಡಿ ಶಿಕ್ಷಕಿ

- Advertisement -
- Advertisement -

ತುಮಕೂರು: ಚಡ್ಡಿಯಲ್ಲಿ ಮೂತ್ರ ವಿಸರ್ಜನೆ ಮಾಡಿಕೊಂಡಿದಕ್ಕೆ ಬಾಲಕನ ಗುಪ್ತಾಂಗಕ್ಕೆ ಶಿಕ್ಷಕಿ ಬೆಂಕಿ ಇಟ್ಟ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆಯಲ್ಲಿ ಅಂಗನವಾಡಿ ಶಿಕ್ಷಕಿಯಿಂದ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.

ಮೂರು ವರ್ಷದ ಬಾಲಕ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದು, ಬಾಲಕನನ್ನ ಹೆದರಿಸಲು ಹೋಗಿ ಶಿಕ್ಷಕಿ ಬೆಂಕಿ ಕಡ್ಡಿಯಿಂದ ಬಾಲಕ ಧರಿಸಿದ್ದ ಚಡ್ಡಿಗೆ ಬೆಂಕಿ ಇಟ್ಟಿದ್ದಾರೆ.

ಈ ವೇಳೆ ಬೆಂಕಿ ಹೊತ್ತಿಕೊಂಡು ಬಾಲಕನ ಗುಪ್ತಾಂಗ ಮತ್ತು ತೊಡೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ.

ಘಟನೆ ಬೆಳಕಿಗೆ ಬಂದ ಬಳಿಕ ತುಮಕೂರು ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿದ್ದು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಗೆ ನೋಟೀಸ್ ಜಾರಿಗೊಳಿಸಿದ್ದಾರೆ‌.

ಸದ್ಯ ಬಾಲಕನಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!