Friday, May 17, 2024
Homeಕರಾವಳಿಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ

ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ

spot_img
- Advertisement -
- Advertisement -

ಬೆಂಗಳೂರು : ನಾಳೆಯಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದೀಗ ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ ನೀಡಿದೆ. ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರ ಸಂಘ ಕರೆ ನೀಡಿದೆ.

ಮತ್ತೊಂದೆಡೆ ರಾಜ್ಯ ನೌಕರರ ಮನವೊಲಿಸಲು ಸರ್ಕಾರ ಕಸರತ್ತು ಮಾಡುತ್ತಿದ್ದು, ಇದೀಗ ಸಂಜೆ ಸಿಎಂ ಸೂಚನೆ ಮೇರೆಗೆ ಸಿಎಸ್ ನೇತೃತ್ವದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.ಇದರ ನಡುವೆ ಸರ್ಕಾರಿ ಶಾಲೆಗಳ ಸಂಪೂರ್ಣ ಬಂದ್ ಗೆ ಶಿಕ್ಷಕರ ಸಂಘ ಕರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಬಲ ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರಿಗೆ ಕರೆ ನೀಡಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಮಾಹಿತಿ ನೀಡಿದ್ದಾರೆ. ಎಲ್ಲಾ ಶಿಕ್ಷಕರು ಕರ್ತವ್ಯಕ್ಕೆ ಗೈರಾಗಬೇಕು. ವಿದ್ಯಾರ್ಥಿ ವೇತನ, ಬಿಸಿಯೂಟ , ಸ್ಯಾಟ್ಸ್, ಸೇರಿದಂತೆ ಯಾವುದೇ ಆನ್ ಲೈನ್ ಕೆಲಸದಲ್ಲಿ ಭಾಗಿಯಾಗಬಾರದು ಎಂದು ಮನವಿ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನೂ ಬಂದ್ ಮಾಡುವಂತೆ ಶಿಕ್ಷಕರಿಗೆ ಕರೆ ನೀಡಲಾಗಿದೆ.

- Advertisement -
spot_img

Latest News

error: Content is protected !!