Friday, April 19, 2024
Homeಕರಾವಳಿಉಡುಪಿಉಡುಪಿ: ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

spot_img
- Advertisement -
- Advertisement -

ಉಡುಪಿ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಮತ್ತು ಕಾಪು ತಾಲೂಕಿನ ಮಲ್ಲಾರುನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಝಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷಾ ಶಿಕ್ಷಕರ- 2 ಹುದ್ದೆ (ವಿದ್ಯಾರ್ಹತೆ: ಬಿ.ಎ. ಬಿ.ಎಡ್), ಸಮಾಜ ವಿಜ್ಞಾನ ಶಿಕ್ಷಕರ- 2 ಹುದ್ದೆ ಮತ್ತು ವಿಜ್ಞಾನ ಶಿಕ್ಷಕರ -2 (ವಿದ್ಯಾರ್ಹತೆ: ಬಿ.ಎಸ್ಸಿ. ಬಿಎಡ್/ಎಂ.ಎಸ್ಸಿ) ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ.10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ್ ಭವನ, ಶಿವಳ್ಳಿ, ಮಣಿಪಾಲ ದೂರವಾಣಿ ಸಂಖ್ಯೆ: 0820- 2573596 ಅನ್ನು ಸಂಪರ್ಕಿಸು ವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!