Wednesday, June 24, 2026
Homeಕ್ರೀಡೆಟಿ-ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಗೆದ್ದ ಟೀಮ್ ಇಂಡಿಯಾ

ಟಿ-ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಗೆದ್ದ ಟೀಮ್ ಇಂಡಿಯಾ

- Advertisement -
- Advertisement -

ಬಾರ್ಬಡೋಸ್: ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದ ಟಿ-ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ.

ಈ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ವಿಶ್ವಕಪ್ ಗೆದ್ದಿದ್ದು, ಎರಡನೇ ಬಾರಿಗೆ ಟಿ-ಟ್ವೆಂಟಿ ವಿಶ್ವಕಪ್ ಗೆದ್ದಂತಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತ್ತು. ಗೆಲುವಿನ 178 ರನ್ ಬೆನ್ನಟ್ಟಲಾರಂಭಿಸಿದ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಬಾಲ್ ಗೆ ಒಂಬತ್ತು ರನ್ ಗಳಿಸಬೇಕಾದ ಒತ್ತಡಕ್ಕೆ ಬಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಗೆಲುವಿನ ಉಡುಗೊರೆ ನೀಡಿದಂತಾಗಿದೆ.

ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಮೂಲಕ ಮ್ಯಾನ್ ಆಫ್ ದ ಮ್ಯಾಚ್ ಆಗಿ ಹೊರಹೊಮ್ಮಿದರೆ, ಜಸ್ ಪ್ರೀತ್ ಬೂಮ್ರಾ ಪ್ಲೇಯರ್ ಆಫ್ ದಿ ಸೀರೀಸ್ ಆಗಿದ್ದಾರೆ.

ಇಂದಿನ ಗೆಲುವಿನ ಮೂಲಕ ಟೀಮ್ ಇಂಡಿಯಾ ತಲಾ ಎರಡು ಬಾರಿ ಟಿ-ಟ್ವೆಂಟಿ ಮತ್ತು ಏಕದಿನ ವಿಶ್ವಕಪ್ ಗೆದ್ದಂತಾಗಿದೆ.

- Advertisement -

Latest News

error: Content is protected !!