Sunday, February 16, 2025
Homeಅಪರಾಧಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ; ಪತ್ನಿ, ಆಕೆಯ ತಾಯಿ, ಸಹೋದರ ಪೊಲೀಸರ ವಶಕ್ಕೆ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ; ಪತ್ನಿ, ಆಕೆಯ ತಾಯಿ, ಸಹೋದರ ಪೊಲೀಸರ ವಶಕ್ಕೆ

spot_img
- Advertisement -
- Advertisement -

ಬೆಂಗಳೂರು: ಇಲ್ಲಿನ ಮಾರತ್ತ ಹಳ್ಳಿಯ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳು ಸುಭಾಷ್ ಪತ್ನಿ, ಆಕೆಯ ತಾಯಿ ಮತ್ತು ಸಹೋದರ. ಇವರನ್ನು ಬೆಂಗಳೂರು ಪೊಲೀಸರು ಡಿ. 15 ಭಾನುವಾರದಂದು ಬಂಧಿಸಿದ್ದಾರೆ.

24 ಪುಟಗಳ ಡೇತ್ ನೋಟ್ ಮತ್ತು ವೀಡಿಯೊವನ್ನು ಹಂಚಿಕೊಂಡು 34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಸೋಮವಾರದಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಮೂಲ ಕಾರಣ ತನ್ನ ಪತ್ನಿ ಮತ್ತು ಆಕೆಯ ಕುಟುಂಬವಾಗಿದ್ದು, ಅವರ ಕಿರುಕುಳದಿಂದ ಬೇಸತ್ತು ಈ ರೀತಿ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದರು.

ಈ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಸುಭಾಷ್ ಅವರ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಗುರುಗ್ರಾಮ್‌ನಲ್ಲಿ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಪ್ರಯಾಗ್‌ರಾಜ್‌ನಲ್ಲಿ ಬಂಧಿಸಿದ್ದಾರೆ.

ನಿಕಿತಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ ನಂತರ ಬಂಧಿಸಲಾಗಿದೆ.

- Advertisement -
spot_img

Latest News

error: Content is protected !!