Monday, May 6, 2024
Homeಕರಾವಳಿಉಡುಪಿಉಡುಪಿ: ಮಿಕ್ಸಿ ಖರೀದಿ ಮಾಡಿದ ಮೂರೇ ತಿಂಗಳಲ್ಲಿ ತಾಂತ್ರಿಕ ದೋಷ: 20,189 ರೂ.ಪರಿಹಾರ ನೀಡುವಂತೆ ಜಿಲ್ಲಾ...

ಉಡುಪಿ: ಮಿಕ್ಸಿ ಖರೀದಿ ಮಾಡಿದ ಮೂರೇ ತಿಂಗಳಲ್ಲಿ ತಾಂತ್ರಿಕ ದೋಷ: 20,189 ರೂ.ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ಆಯೋಗ ಆದೇಶ

spot_img
- Advertisement -
- Advertisement -

ಉಡುಪಿ: ತಾಂತ್ರಿಕ ದೋಷವಿದ್ದ ಮಿಕ್ಸರ್ ಗ್ರೈಂಡರ್ ಮಾರಾಟ ಮಾಡಿದ್ದಕ್ಕೆ ಗ್ರಾಹಕಿಗೆ  20,189 ರೂ.ಪರಿಹಾರ ಒದಗಿಸಬೇಕೆಂದು ಕೋರ್ಟ್‌ ಆದೇಶಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಪೈ ಇಂಟರ್‌ನ್ಯಾಷನಲ್ ಹಾಗೂ ಪ್ರೀತಿ ಕಿಚನ್ ಅಪ್ಲೆಯನ್ಸಸ್ ಪ್ರೈ.ಲಿ. ಪರಿಹಾರ ಒದಗಿಸಬೇಕು ಎಂದು ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ನೀಡಿದೆ.

ಉಪನ್ಯಾಸಕಿ ಅನಿತಾ ಅವರು ಎರಡು ವರ್ಷಗಳ ಹಿಂದೆ ಪೈ ಇಂಟರ್‌ನ್ಯಾಷನಲ್ ನಲ್ಲಿ 4,239 ರೂ.ಗಳನ್ನು ನೀಡಿ ಪ್ರೀತಿ ಮಿಕ್ಸರ್ ಗ್ರೈಂಡರ್ ಖರೀದಿಸಿದ್ದರು. ಆದರೆ ಮೂರೇ ತಿಂಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಮಿಕ್ಸಿಗೆ ಎರಡು ವರ್ಷಗಳ ಗ್ಯಾರಂಟಿ ಮತ್ತು 5 ವರ್ಷಗಳ ವಾರೆಂಟಿ ಇರುವುದರಿಂದ ಹೊಸ ಮಿಕ್ಸಿ ಕೊಡುವಂತೆ ಗ್ರಾಹಕಿ ಮನವಿ ಮಾಡಿದ್ದರು. ಆದರೆ ಪೈ ಇಂಟರ್‌ನ್ಯಾಷನಲ್ ನವರು ಬದಲಿ ಮಿಕ್ಸಿಯನ್ನು ಕೊಡಲು ಒಪ್ಪದೇ ಅದೇ ಮಿಕ್ಸಿಯನ್ನು ಸರಿಪಡಿಸಿ ಕೊಟ್ಟಿದ್ದರು. ಅದರ ಅನಂತರವೂ ಮೂರು ತಿಂಗಳಿಗೊಮ್ಮೆ ಮಿಕ್ಸಿಯಲ್ಲಿ ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿತ್ತು. ಹೀಗಾಗಿ ಉಪನ್ಯಾಸಕಿಯ ಜಿಲ್ಲಾ ಗ್ರಾಹಕರ ಆಯೋಗದ ಮೊರೆ ಹೋಗಿದ್ದು, ತೀರ್ಪು ಇವರ ಪರವಾಗೇ ಬಂದಿದೆ.  

- Advertisement -
spot_img

Latest News

error: Content is protected !!