Thursday, June 4, 2026
HomeUncategorizedಕೊಡಗಿನ ಭಾಗಮಂಡಲದ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

ಕೊಡಗಿನ ಭಾಗಮಂಡಲದ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

- Advertisement -
- Advertisement -

ಕೊಡಗಿನ ಭಾಗಮಂಡಲದ ತಲಕಾವೇರಿಯಲ್ಲಿ ಇಂದು ಬೆಳಗ್ಗೆ  7.41ಕ್ಕೆ ಪವಿತ್ರ ತೀರ್ಥೋದ್ಬವವಾಗಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಬ್ರಹ್ಮ ಕುಂಡಿಕೆಯಿಂದ ತೀರ್ಥೋದ್ಭವಾಗಿದ್ದು ಸಾವಿರಾರು ಭಕ್ತರು ಅಭೂತಪೂರ್ವ ಕ್ಷಣವನ್ನು ಕಣ್ತುಂಬಿಕೊಂಡ್ರು.

ಇಂದು ಬೆಳಗ್ಗೆ 7 ಗಂಟೆ 41 ನಿಮಿಷಕ್ಕೆ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಿದೆ.ಪ್ರಧಾನ ಅರ್ಚಕ ಪ್ರಶಾಂತ್ ಅಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆದಿದ್ದು, ಕಾವೇರಿ ತೀರ್ಥೋದ್ಬವದ ಬೆನ್ನಲ್ಲೇ ಸಹಸ್ರಾರು ಭಕ್ತರು ಜಯಘೋಷ ಹಾಕಿದ್ದಾರೆ. ಇಂದು ನಡೆದ ಕಾವೇರಿ ತೀರ್ಥೋದ್ಭವದಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಭಾಗವಹಿಸಿ, ಪವಿತ್ರ ತೀರ್ಥೋದ್ಭವದಲ್ಲಿ ಮಿಂದೆದ್ದರು.

- Advertisement -

Latest News

error: Content is protected !!