Tuesday, May 21, 2024
Homeತಾಜಾ ಸುದ್ದಿಲೋಕಸಭಾ ಚುನಾವಣೆಯ ಹೊತ್ತಲ್ಲಿ ಬಿಜೆಪಿ ಗೆ ಬಿಗ್ ಶಾಕ್; ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕೈ ಪಡೆ...

ಲೋಕಸಭಾ ಚುನಾವಣೆಯ ಹೊತ್ತಲ್ಲಿ ಬಿಜೆಪಿ ಗೆ ಬಿಗ್ ಶಾಕ್; ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕೈ ಪಡೆ ಸೇರಿದ ತೇಜಸ್ವಿನಿ ಗೌಡ

spot_img
- Advertisement -
- Advertisement -

ವದೆಹಲಿ : ಲೋಕಸಭಾ ಚುನಾವಣೆಯ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಎಂಎಲ್ ಸಿ ತೇಜಸ್ವಿನಿ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

ಮೊನ್ನೆಯಷ್ಟೇ ಬಿಜೆಪಿ ವಿಧಾನ​ ಪರಿಷತ್ ​ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಇದೀಗ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಮೊನ್ನೆ ವಿಧಾನ್​ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು ಎನ್ನಲಾಗುತ್ತಿದೆ.

ಇದೀಗ ನವದೆಹಲಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಎಂಎಲ್ಸಿ ತೇಜಸ್ವಿನಿ ಗೌಡ ಅವರು ಪಕ್ಷದ ನಾಯಕರಾದ ಜಯರಾಮ್ ರಮೇಶ್ ಹಾಗೂ ಪವನ್ ಕೆರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

- Advertisement -
spot_img

Latest News

error: Content is protected !!