- Advertisement -
- Advertisement -
ಬೆಂಗಳೂರು: ಜೂನ್ 1 ರಿಂದ ರಾಜ್ಯದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ದೇವಾಲಯಗಳನ್ನು ಜೂನ್ 1 ರಿಂದ ಓಪನ್ ಮಾಡಲು ತೀರ್ಮಾನಿಸಲಾಗಿದೆ. ನಿಯಮಾನುಸಾರ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಅಂತರ ಕಾಯ್ದುಕೊಳ್ಳುವುದು ಸೇರಿ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಭಕ್ತರು ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.
ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಕಾರಣ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಆನ್ ಲೈನ್ ಪೂಜೆಗೆ ಅವಕಾಶ ನೀಡುವ ವಿಚಾರ ಚರ್ಚೆಗೆ ಕಾರಣವಾಗಿದೆ. ಹೀಗಿರುವಾಗಲೇ ದೇವಾಲಯ ತೆರೆಯಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.
- Advertisement -